ಅಂಬೇಡ್ಕರ್ ಶಾಲೆಗೆ ಸೇರಿದ ದಿನಾಚರಣೆ

2 years ago

#Ambedkar #School #JoiningDay #Celebration

ಸರ್ಕಾರಿ ಶಾಲೆ ಮಕ್ಕಳಿಗೆ ನೋಟ್ ಪುಸ್ತಕ ಪೆನ್ ಪೆನ್ಸಿಲ್ ಸೇರಿ ಶಾಲಾ ಪರಿಕರಗಳ ವಿತರಣೆ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಶಾಲೆಗೆ ಸೇರಿದ ದಿನದ ಅಂಗವಾಗಿ ಸರ್ಕಾರಿ ಮಾದರಿ ಹೆಣ್ಣುಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಪೆನ್ ಪೆನ್ಸಿಲ್ ಸೇರಿ ಶಾಲಾ ಪರಿಕರಗಳನ್ನು ವಿತರಣೆ ಮಾಡುವ ಮೂಲಕ ಆಚರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಆನೇಕಲ್ ತಹಶೀಲ್ದಾರ್ ಶಿವಪ್ಪ ಲಮಾಣಿ ಹಾಗೂ ಆನೇಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಚಂದ್ರಪ್ಪ ಶಾಲಾ ವಿಧ್ಯಾರ್ಥಿಗಳಿಗೆ ಪರಿಕರಗಳನ್ನ ವಿತರಿಸಿದರು.

ಸರ್ಕಾರಿ  ಶಾಲೆಯಲ್ಲಿ ಕಲಿತವರು ಉತ್ತಮವಾದ ಸ್ಥಾನಮಾನ ಪಡೆದಿದ್ದಾರೆ. ಎಲ್ಲರೂ ಚೆನ್ನಾಗಿ ಓದಿ ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದರ್ಶನದಂತೆ ನಡೆಯಬೇಕು ಎಂದು ಕಿವಿಮಾತುಗಳನ್ನು ವಿದ್ಯಾರ್ಥಿಗಳಿಗೆ ಹೇಳಿದರು.

Leave a Reply