ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸಂವಿಧಾನ ಶಿಲ್ಪಿ, ಭಾರತ ರತ್ನ ಡಾll ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿ, ಮಾತನಾಡಿದರು.
ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಾಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು ಎಂದರು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ಎಂತಹಾ ಸಂವಿಧಾನದ ಅಗತ್ಯವಿದೆ ಎಂದು ಯೋಚಿಸಿ, ಇತರೆ ದೇಶಗಳ ಸಂವಿಧಾನವನ್ನು ಅಭ್ಯಾಸ ಮಾಡಿ, ಅತ್ಯಂತ ಶ್ರೇಷ್ಠ ಸಂವಿಧಾನವನ್ನು ಕೊಟ್ಟಿದ್ದಾರೆ ಎಂದರು.
ನಮ್ಮ ಸಾಮಾಜಿಕ ವ್ಯವಸ್ಥೆಯ ಬದಲಾವಣೆಯಾಗಬೇಕು, ಎಲ್ಲರಿಗೂ ಸಮಾನ ಅವಕಾಶಗಳು ದೊರಕಬೇಕು ಹಾಗೂ ಸಾಮಾಜಿಕ ನ್ಯಾಯ ಸ್ಥಾಪನೆಯಾಗಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದರು.
ಶಾಲಾ ಕಾಲೇಜು ಮಕ್ಕಳಿಗೆ ಇದರ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ನಿತ್ಯ ಬೋಧಿಸಲಾಗುತ್ತಿದೆ. ಸಂವಿಧಾನವು ಪ್ರತಿಯೊಬ್ಬರಿಗೂ ಹಕ್ಕು ಮತ್ತು ಬಾಧ್ಯತೆಗಳನ್ನು ನೀಡಿದೆ. ಸಂವಿಧಾನದ ಧ್ಯೇಯೋದ್ದೇಶಗಳು ಎಲ್ಲರಿಗೂ ಅರ್ಥವಾಗಬೇಕು ಎಂಬ ಕಾರಣದಿಂದ ಸರ್ಕಾರ ಇದನ್ನು ಜಾರಿ ಮಾಡಿದೆ ಎಂದರು.
ಅಂಬೇಡ್ಕರ್ ಅವರ ಪರಿನಿರ್ವಾಣ ದಿನದಂದು ನಾವು ಅವರನ್ನು ಸ್ಮರಿಸುವ ಕೆಲಸವನ್ನು ಮಾಡಿದ್ದೇವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅವರ ಕೊನೆಯ ದಿನಗಳಲ್ಲಿ ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ ಎಂದಿದ್ದರು ಎಂದರು.
ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಪಟ್ಟು, ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ್ದೇನೆ ಎಂದೂ ಹೇಳಿದ್ದರು. ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿ ಹೀಗೆ ಮಾಡಿದ್ದರು ಎಂದರು.




