ಸಾಮಾಜಿಕ ಅಸಮಾನತೆ, ಅಸ್ಪೃಶ್ಯತೆ, ಜಾತಿ ತಾರತಮ್ಯ, ಶೋಷಣೆಯ ವಿರುದ್ಧ ಹೋರಾಡಿದ ಡಾ. ಬಿ.ಆರ್. ಅಂಬೇಡ್ಕರ್ ಅವರು, ಶೋಷಿತರ ಪಾಲಿನ ದನಿಯಾದವರು. ಅವರ ಪರಿಶ್ರಮದಿಂದ ಸೃಷ್ಟಿಯಾದ ಸಂವಿಧಾನದಡಿ ಇಂದಿನ ಭವ್ಯ ಭಾರತ ಬೆಳೆಯುತ್ತಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಸ್ವತಃ ತಾರತಮ್ಯ, ಅವಮಾನಗಳ ನೋವು ಅನುಭವಿಸಿದ ಅವರು, ತಮ್ಮ ಮುಂದಿನ ತಲೆಮಾರು ಈ ಶೋಷಣೆಗಳಿಂದ ಮುಕ್ತವಾಗಬೇಕು ಎಂಬ ಮಹತ್ವಾಕಾಂಕ್ಷೆಯೊಂದಿಗೆ ರೂಪಿಸಿದ ಸಂವಿಧಾನವು, ಭಾರತದ ಸಾಮಾಜಿಕ, ರಾಜಕೀಯ ಹಾಗೂ ಆರ್ಥಿಕ ಬದಲಾವಣೆಗಳಿಗೆ ನಾಂದಿ ಹಾಡಿತು. ಇಂದು ವಿಶ್ವದಲ್ಲಿಯೇ ಅತ್ಯಂತ ಪ್ರಬಲ ಪ್ರಜಾಪ್ರಭುತ್ವವನ್ನು ಹೊಂದಿದ ಹೆಗ್ಗಳಿಕೆ ಭಾರತಕ್ಕೆ ಸಂದಿದೆ ಎಂದರೆ ಅದಕ್ಕೆ ಮೂಲ ಕಾರಣೀಭೂತರು ಬಾಬಾ ಸಾಹೇಬರು.
ಇತ್ತೀಚಿನ ದೀನ ದಲಿತರಿಗೆ ಸಾಮಾಜಿಕವಾಗಿ ಮನ್ನಣೆ ಸಿಗುತ್ತಿದೆ, ಆರ್ಥಿಕವಾಗಿ ಸಬಲರಾಗಲು ಅವಕಾಶಗಳು ದೊರಕುತ್ತಿವೆ ಎಂದರೆ ಅದರ ಹಿಂದೆ ಇರುವುದು ಬಾಬಾ ಸಾಹೇಬರ ಪರಿಶ್ರಮ. ಅಂಬೇಡ್ಕರ್ ಅವರು ಹಾಕಿಕೊಟ್ಟ ಸಮಾನತೆ, ಸಮಾನ ಅವಕಾಶ, ಶೋಷಣೆ ಮುಕ್ತ ಸಮಾಜದ ಹೋರಾಟದ ಹಾದಿ ನಮ್ಮ-ನಿಮ್ಮೆಲ್ಲರಿಗೂ ಸ್ಫೂರ್ತಿ. ಅಂಬೇಡ್ಕರ್ ಅವರ ಹೆಸರೇ ರೋಮಾಂಚನ, ಕಿಚ್ಚು ಮೂಡಿಸುವಂತಹ ಒಂದು ಶಕ್ತಿ.
ಆರ್ಥಿಕವಾಗಿ ಮಾತ್ರವಲ್ಲದೆ, ಸಾಮಾಜಿಕವಾಗಿ, ಬೌದ್ಧಿಕವಾಗಿ ಹಾಗೂ ರಾಜಕೀಯವಾಗಿ ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವ ಡಾ. ಬಿ.ಆರ್ ಅಂಬೇಡ್ಕರ್ ಅವರ ಕನಸನ್ನು ನನಸಾಗಿಸಲು ನಾವೆಲ್ಲರೂ ಕೈಜೋಡಿಸೋಣ.
– ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ




