ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಭೂ ಸುರಕ್ಷಾ ಕಾರ್ಯಕ್ರಮ ಫೆ.01 ರಿಂದಲೇ ಶುರುವಾಗಿದೆ. ಈಗಾಗಲೇ ಪ್ರಾಯೋಗಿಕವಾಗಿ 31 ತಾಲೂಕುಗಳ ಭೂ ದಾಖಲೆಗಳನ್ನು ಡಿಜಿಟಲೀರಣಗೊಳಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ ಹಾಗೂ ಕಂದಾಯ ಆಯುಕ್ತಾಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೊಸದಾಗಿ ಆಯ್ಕೆಯಾದ 1,000 ಪರವಾನಗಿ ಭೂಮಾಪಕರುಗಳಿಗೆ ಪರವಾನಗಿ ಪ್ರಮಾಣ ಪತ್ರ ಹಾಗೂ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಅವರು ಮಾತನಾಡಿದರು.
ತಹಶೀಲ್ದಾರ್, ನಾಡ ಕಚೇರಿ ಸೇರಿದಂತೆ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿರುವ ಭೂ ದಾಖಲೆಗಳನ್ನೂ ಡಿಜಿಟಲೀಕರಿಸಿ ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡುವುದು, ಆ ಮೂಲಕ ಸರ್ಕಾರಿ ಕಚೇರಿಗಳಿಗೆ ಅವರ ಅನಗತ್ಯ ಓಡಾಡಕ್ಕೆ ಪೂರ್ಣ ವಿರಾಮ ಇಡುವುದು ಈ ಯೋಜನೆಯ ಉದ್ದೇಶ. ಈ ಯೋಜನೆ ಈಗಾಗಲೇ ಯಶಸ್ವಿಯಾಗಿದ್ದು, ಶೀಘ್ರದಲ್ಲೇ ರಾಜ್ಯದ್ಯಂತ ಎಲ್ಲಾ ತಾಲೂಕುಗಳಿಗೂ ವಿಸ್ತರಿಸಲಾಗುವುದು ಎಂದರು.




