ಆರೋಗ್ಯ ಕವಚ ಆಂಬುಲೆನ್ಸ್ 108 ಅಂಬ್ಯುಲೆನ್ಸ್ ಖಾಸಗಿ ಹಿಡಿತದಿಂದ ಮುಕ್ತ 

10 months ago

ಬೆಂಗಳೂರು: ತುರ್ತು ಆರೋಗ್ಯ ಸೇವೆ ಒದಗಿಸಲು ರೂಪಿಸಲಾಗಿರುವ ಆರೋಗ್ಯ ಕವಚ ಆಂಬುಲೆನ್ಸ್ 108 ಅಂಬ್ಯುಲೆನ್ಸ್ ಗಳನ್ನು ಖಾಸಗಿ ಹಿಡಿತದಿಂದ ಮುಕ್ತಗೊಳಿಸಲಾಗಿದೆ. ಇನ್ನು ಮುಂದೆ 108 ಅಂಬ್ಯುಲೆನ್ಸ್ ವ್ಯವಸ್ಥೆಯನ್ನು ಆರೋಗ್ಯ ಇಲಾಖೆ ನಿರ್ವಹಣೆ ಮಾಡಲಿದೆ. ಈ ಕ್ರಮದಿಂದಾಗಿ 108 ಆರೋಗ್ಯ ಕವಚ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗುವ ವಿಶ್ವಾಸವಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 250 ಕೋಟಿಯಷ್ಟು ಉಳಿತಾಯವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

108 ಅಧೀನದಲ್ಲಿರುವ ಒಟ್ಟು 715 ಅಂಬ್ಯುಲೆನ್ಸ್ ನಿರ್ವಹಣೆಗಾಗಿ ರಾಜ್ಯ ಮಟ್ಟದಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್ ತೆರೆಯಲಾಗುವುದು. ಇದಕ್ಕಾಗಿ 112 NG -ERSS ತಂತ್ರಾಂಶ ಬಳಿಸಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಪ್ರತಿ ಜಿಲ್ಲೆಗಳಲ್ಲಿಯೂ 108 ಕಂಟ್ರೋಲ್ ಸೆಂಟರ್ ಗಳು ಕಾರ್ಯನಿರ್ವಹಿಸಲಿದ್ದು, ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ನಿರ್ವಹಣೆಯ ಜವಾಬ್ದಾರಿ ವಹಿಸಲಾಗಿದೆ.


ಅಂಬ್ಯುಲೆನ್ಸ್ ಗಳಿಗೆ ಚಾಲಕರು ಹಾಗೂ ನರ್ಸ್ ಸಿಬ್ಬಂದಿಯನ್ನು ಜಿಲ್ಲಾ ಮಟ್ಟದಲ್ಲಿಯೇ ಹೊರಗುತ್ತಿಗೆಯಲ್ಲಿ ನೇಮಕಾತಿ  ಮಾಡಿಕೊಳ್ಳಲಾಗುವುದು. ಆರಂಭದಲ್ಲಿ ಚಾಮರಾಜ ನಗರ ಜಿಲ್ಲೆಯಲ್ಲಿ ನಿರ್ವಹಣೆ ಪ್ರಾರಂಭಿಸಲಾಗುತ್ತಿದೆ. ನಂತರದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಿರ್ವಹಣೆ ಕಾರ್ಯ ಆರಂಭವಾಗಲಿದೆ. ಅಲ್ಲದೇ 108 ಹೊರತಾಗಿ ರಾಜ್ಯದಲ್ಲಿರುವ 1000 ಕ್ಕೂ ಹೆಚ್ಚು ಸ್ಟೇಟ್ ಅಂಬ್ಯುಲೆನ್ಸ್ ಗಳನ್ನು ಕೂಡಾ 108 ಕಮಾಂಡ್ ಸೆಂಟರ್ ಅಧೀನಕ್ಕೆ ತರಲು ಯೋಜನೆ ರೂಪಿಸಲಾಗಿದೆ.

Leave a Reply