ಬುಧವಾರ ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಪ್ರಾಧಿಕಾರಕ್ಕೆ ಸಂಬಂಧಿಸಿದ ತಿದ್ದುಪಡಿ ವಿಧೇಯಕಗಳ ಮಾಹಿತಿ ಈ ಕೆಳಗಿನಂತಿವೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
1) ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ – 2025
2) ನಾಡಪ್ರಭು ಕೆಂಪೆಗೌಡ ಪಾರಂಪರಿಕ ತಾಣ ಅಭಿವೃದ್ಧಿ ತಿದ್ದುಪಡಿ ವಿಧೇಯಕ – 2025
3) ಕಿತ್ತೂರು ಅಭಿವೃದ್ದಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ – 2025
4) ಕೂಡಲಸಂಗಮ ಅಭಿವೃದ್ದಿ ಮಂಡಳಿ ತಿದ್ದುಪಡಿ ವಿಧೇಯಕ – 2025
5) ಬನವಾಸಿ ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ – 2025
6) ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ – 2025
ರಾಜ್ಯದ ಎಲ್ಲಾ ಪ್ರಾಧಿಕಾರಗಳ ಅಭಿವೃದ್ಧಿ ಕೆಲಸ ಸಕ್ರೀಯವಾಗಿ ಮತ್ತು ಪರಿಣಾಮಕಾರಿಯಾಗಿ ನಡೆಯಬೇಕು ಎಂಬ ಉದ್ದೇಶದಿಂದ ಈ ಎಲ್ಲಾ ತಿದ್ದುಪಡಿ ವಿಧೇಯಕಗಳನ್ನೂ ಮಂಡಿಸಲಾಗಿದೆ ಎಂದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸದನಕ್ಕೆ ಮಾಹಿತಿ ನೀಡಿದರು.
ಈ ಹಿಂದೆ ಒಂದೆರಡು ಅಭಿವೃದ್ಧಿ ಪ್ರಾಧಿಕಾರಗಳು ಇದ್ದವು, ಹೀಗಾಗಿ ಪ್ರಾಧಿಕಾರಗಳಿಗೆ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಿರಬೇಕು ಎಂಬ ನಿಯಮ ಇತ್ತು. ಆದರೆ, ಇಂದು ಪ್ರಾಧಿಕಾರಗಳ ಸಂಖ್ಯೆ ಅಧಿಕವಾಗಿದೆ. ಅಲ್ಲದೆ, ಮುಖ್ಯಮಂತ್ರಿಗಳಿಗೂ ಕೆಲಸದ ಒತ್ತಡ ಅಧಿಕವಾಗಿದ್ದು, ಈ ನಡುವೆ ಪ್ರಾಧಿಕಾರಗಳ ಅಭಿವೃದ್ಧಿಗೆ ಮುಖ್ಯಮಂತ್ರಿಗಳಿಂದ ಗಮನ ನೀಡುವುದು ಕಷ್ಟದ ವಿಚಾರ ಎಂದರು.
ಹೀಗಾಗಿ ಎಲ್ಲಾ ಪ್ರಾಧಿಕಾರಗಳ ಅಭಿವೃದ್ಧಿ ಕೆಲಸ ಸಕ್ರಿಯವಾಗಿ ಮತ್ತು ಪರಿಣಾಮಕಾರಿಯಾಗಿ ನಡೆಯಬೇಕು ಎಂಬ ಉದ್ದೇಶದಿಂದ ಪ್ರಾಧಿಕಾರಗಳಿಗೆ ಮುಖ್ಯಮಂತ್ರಿ ಅಥವಾ ಇಲಾಖೆ ಸಚಿವರಾದ ಕಂದಾಯ ಸಚಿವರು ಅಥವಾ ಸರ್ಕಾರ ಸೂಚಿಸಿದ ಪ್ರಾಧಿಕಾರದ ಅಭಿವೃದ್ಧಿ ಬಗ್ಗೆ ಆಸಕ್ತಿ ಇರುವ ಯಾವುದೇ ಸಚಿವರನ್ನು ನೇಮಕ ಮಾಡಲು ಈ ತಿದ್ದುಪಡಿಯಲ್ಲಿ ಅವಕಾಶ ನೀಡಲು ಉದ್ದೇಶಿಸಲಾಗಿದೆ ಎಂದರು.




