ಪ್ರಹ್ಲಾದ್ ಜೋಷಿ, ಬಿ.ಎಲ್.ಸಂತೋಷ್ ಅವರಿಗೆ ಜಾಗ ಮಾಡಿಕೊಡಲು ಅಮಿತ್ ಶಾ ಸಿದ್ಧತೆ: ಕೆಪಿಸಿಸಿ

3 years ago

ಬೆಂಗಳೂರು: ಟಿಕೆಟ್ ಘೋಷಣೆಯ ಮುನ್ನವೇ ಬಿಜೆಪಿ ಪಕ್ಷದಲ್ಲಿ ವಿಕೆಟ್ ಪತನ ಶುರುವಾಗಿದೆ. ರನ್ ಬಾರಿಸದೆಯೇ ಆಲ್ ಔಟ್ ಆಗುವ ಎಲ್ಲಾ ಲಕ್ಷಣಗಳೂ ಕಾಣುತ್ತಿವೆ! ಎಂದು ಕೆಪಿಸಿಸಿ ಹೇಳಿದೆ.

ಕರ್ನಾಟಕ ಬಿಜೆಪಿಯಲ್ಲಿ ಇಂದು ನಡೆದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ, Dear BJP Karnataka, ಈಗ ಸುಧಾರಿಸಿಕೊಂಡು, ಸಾವರಿಸಿಕೊಂಡು 5 ವರ್ಷ ಕಳೆದ ಮೇಲೆ ಚುನಾವಣೆಗೆ ಬನ್ನಿ!

* BS Yediyurappa ಅವರನ್ನು ಕಣ್ಣೀರು ಹಾಕಿಸಿ ಪದಚ್ಯುತಿ ಮಾಡಲಾಯ್ತು.

* ಮಾಡಿದ್ದುಣ್ಣೋ ಮಹಾರಾಯ ಎಂಬಂತೆ KS Eshwarappa ಅವರ ರಾಜಕೀಯವನ್ನೇ ಮುಗಿಸಿಯಾಯ್ತು.

* ಜಗದೀಶ್ ಶೆಟ್ಟರ್ ಅವರೂ ತೆರೆಯ ಹಿಂದೆ ಸರಿಯುವ ಕಾಲವೂ ಸನ್ನಿಹಿತವಾಗಿದೆ.

ಅಲ್ಲಿಗೆ ಬಿಜೆಪಿಯಲ್ಲಿ ಲಿಂಗಾಯತ ಹಾಗೂ ಹಿಂದುಳಿದ ವರ್ಗದ ನಾಯಕತ್ವವನ್ನು ಕಿತ್ತು ನಾಗಪುರದ ನೌಕರರಾದ ಪ್ರಲ್ಹಾದ್ ಜೋಶಿ ಹಾಗೂ ಸಂತೋಷ ಕೂಟ ಆಪೋಷನ ತೆಗೆದುಕೊಂಡಾಯ್ತು! ಎಂದಿದೆ.

ನರೇಂದ್ರ ಮೋದಿ- ಅಮಿತ್ ಶಾ ಅವರ ಜೋಡಿಯ ಮಸಲತ್ತನ್ನು ನೋಡಿದರೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರೂ ತಮ್ಮ ರಾಜಕೀಯ ನಿವೃತ್ತಿ ಘೋಷಿಸಿದರೆ ಯಾವುದೇ ಆಶ್ಚರ್ಯವಿಲ್ಲ! ಜೋಶಿ, ಸಂತೋಷರನ್ನು ಪ್ರತಿಷ್ಠಾಪಿಸಲು ಹವಣಿಸುತ್ತಿರುವ ಬೊಮ್ಮಾಯಿಯವರು ಅದೆಷ್ಟೇ ನಾಗಪುರದ ನೌಕರರು ಎನಿಸಿಕೊಂಡರೂ RSSಗೆ ಅಪಥ್ಯವೇ.. ಯಡಿಯೂರಪ್ಪ ಅವರಂತೆ ಬೊಮ್ಮಾಯಿಯವರ ರಾಜಕೀಯ ಬದುಕೂ ದುರಂತ ಅಂತ್ಯ ಕಾಣಲಿದೆ ಎಂದು ಭವಿಷ್ಯ ನುಡಿದಿದೆ.

  • ಸಂತೋಷ್ ಆಟಕ್ಕೆ ಯಡಿಯೂರಪ್ಪ ಬಲಿ.
  • ಪ್ರಹ್ಲಾದ್ ಜೋಷಿ ಆಟಕ್ಕೆ ಜಗದೀಶ್ ಶೆಟ್ಟರ್ ಬಲಿ.
    ನಾಗಪುರದ ಕರುಳುಬಳ್ಳಿಯ ಸಂಬಂಧವನ್ನೇ ಬಳಸಿ ಬಿಜೆಪಿಯಲ್ಲಿ ಪ್ರಾಭಲ್ಯ ಸಾಧಿಸಿರುವ ಪ್ರಹ್ಲಾದ್ ಜೋಶಿ ಲಿಂಗಾಯತ ನಾಯಕರನ್ನು ಹೊಂಡಕ್ಕೆ ಕೆಡವುದರಲ್ಲಿ ಯಶಸ್ವಿಯಾಗಿದ್ದಾರೆ.
    ಮಾಜಿ ಸಿಎಂ ಒಬ್ಬರಿಗೆ ಟಿಕೆಟ್ ನಿರಾಕರಿಸುವಂತಹ ಅವಮಾನ ಇನ್ನೊಂದಿಲ್ಲ ಎಂದು ಕುಟುಕಿದೆ.
  • ‘ BS Yediyurappa, KS Eshwarappa, Jagadish Shettar .. BJP Karnataka ಎಂಬ ಕಳೆಗೆ ನೀರು, ಗೊಬ್ಬರ ಹಾಕಿ ಬೆಳೆಸಿ, ಪೋಷಿಸಿದ ನಾಯಕರನ್ನು ಅಗೌರವದ ನಿರ್ಗಮನ ದಾರಿ ತೋರಿಸಿದೆ ಬಿಜೆಪಿ. “ನಾವೇ ಎಲ್ಲ” ಎನ್ನುತ್ತಿದ್ದವರಿಗೆ “ನೀವೇನೂ ಅಲ್ಲ” ಎನ್ನುತ್ತಿದೆ ಮೊ-ಶಾ ಜೋಡಿ. ಗೊಡ್ಡು ಹಸುಗಳನ್ನು ಗೋಶಾಲೆಗಾದರೂ ಬಿಡಬಹುದಿತ್ತು, ಆದರೆ ನೇರ ಕಸಾಯಿಖಾನೆಗೇ ಕಳಿಸುತ್ತಿರುವುದು ದುರಂತ! ಎಂದಿದೆ.
  • ಬಿ.ಎಸ್ ಯಡಿಯೂರಪ್ಪ – ಔಟ್
  • ಹಾಲಾಡಿ ಶ್ರೀನಿವಾಸ ಶೆಟ್ಟಿ – ಔಟ್
  • ಕೆ ಎಸ್ ಈಶ್ವರಪ್ಪ – ಔಟ್
  • ಜಗದೀಶ್ ಶೆಟ್ಟರ್ – ಔಟ್?
  • ಸಾವಿರ ತಲೆ ತೆಗೆದಾದರೂ ಸರಿ ಪ್ರಹ್ಲಾದ್ ಜೋಷಿ, ಬಿ ಎಲ್ ಸಂತೋಷ್ ಅವರಿಗೆ ಜಾಗ ಮಾಡಿಕೊಡಲು ಅಮಿತ್ ಶಾ ಅವರು ತಯಾರಾಗಿದ್ದಾರೆ.
  • ಸಂತೋಷ ಕೂಟದ ಆಟಕ್ಕೆ ಬಿಜೆಪಿಯ ಲಿಂಗಾಯತ ಹಾಗೂ ಹಿಂದುಳಿದ ವರ್ಗದ ನಾಯಕರು ಹೀನಾಯ ಅವಮಾನ ಎದುರಿಸಿ ರಾಜಕೀಯದಿಂದ ಹೊರ ಹೊರನಡೆಯುತ್ತಿದ್ದಾರೆ ಎಂದು ಬಿಜೆಪಿ ನಡೆಯನ್ನು ಟೀಕಿಸಿದೆ.

Leave a Reply