ಬೆಂಗಳೂರು: ಬೆಂಗಳೂರು ಗ್ರಾಮಾಂತರ ಸೇರಿದಂತೆ ರಾಜ್ಯದ ಹಲವೆಡೆ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್ ಕುಮಾರ್ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 2ರಂದು ಇಡೀ ದಿನ ಕರ್ನಾಟಕದಲ್ಲಿ ಬೇರೆಬೇರೆ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದರು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಅಮಿತ್ ಶಾ ಅವರು ಚನ್ನಪಟ್ಟಣದಿಂದ ಚುನಾವಣಾ ಪ್ರಚಾರ ಆರಂಭಿಸುತ್ತಾರೆ. ದೇಶ ಒಡೆಯುವವರು ಬೇಕೇ ಅಥವಾ ದೇಶ ಒಂದು ಮಾಡುವವರು ಬೇಕೇ ಎಂಬ ಪ್ರಶ್ನೆಯ ಅಡಿಯಲ್ಲೇ ಈ ಚುನಾವಣೆ ನಡೆಯಲಿದೆ. ದೇಶ ಒಡೆಯುವ ಮಾನಸಿಕತೆಯನ್ನೇ ಸಮರ್ಥಿಸುವ ಕಾಂಗ್ರೆಸ್, ದೇಶ ಒಂದು ಮಾಡುವುದಾಗಿ ಸಂದೇಶ ನೀಡುವ ಅಮಿತ್ ಶಾ ಅವರು ಚನ್ನಪಟ್ಟಣದಲ್ಲಿ ರೋಡ್ ಷೋ ಮೂಲಕ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದರು.
ಅಮಿತ್ ಶಾ ಅವರು ಬೆಳಿಗ್ಗೆ 9 ಗಂಟೆಗೆ ಎರಡೂ ಪಕ್ಷಗಳ ಪ್ರಮುಖ ನಾಯಕರ ಜೊತೆ ಉಪಾಹಾರ ಮಾಡುತ್ತಾರೆ. ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಶಕ್ತಿಕೇಂದ್ರಗಳ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸುತ್ತಾರೆ.
ಮಧ್ಯಾಹ್ನ 2 ಗಂಟೆಯಿಂದ 5ರವರೆಗೆ ಬೆಂಗಳೂರಿನಲ್ಲಿ ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ ಕ್ಷೇತ್ರಗಳ ಪ್ರಮುಖರ ಜೊತೆ ಪ್ರತ್ಯೇಕವಾದ ಸಭೆ ನಡೆಯಲಿದೆ. ಸಂಜೆ 6ಕ್ಕೆ ಚನ್ನಪಟ್ಟಣದಲ್ಲಿ ರೋಡ್ ಷೋ ಇರುತ್ತದೆ. ಚುನಾವಣಾ ಪ್ರಚಾರಕ್ಕೆ ಇದು ಹೆಚ್ಚಿನ ವೇಗ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.




