ಬೆಂಗಳೂರು: ಆಸ್ತಿ ನೋಂದಣಿ, ಮಾರಾಟ, ಭೋಗ್ಯ ಸೇರಿದಂತೆ ಉಪ ನೋಂದಣಿ ಕಚೇರಿಯಲ್ಲಿ ನೋಂದಣಿ ಪ್ರಕ್ರಿಯೆ ಸುಗಮ ಮತ್ತು ಪಾರದರ್ಶಕಗೊಳಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ರೂಪಿಸಿದ್ದ ಮಹತ್ವಾಕಾಂಕ್ಷೆಯ ಕಾವೇರಿ 2.0 ತಂತ್ರಾಂಶ ಹ್ಯಾಕ್ ಆಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಇತ್ತೀಚೆಗೆ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಆಸ್ತಿ ನೋಂದಣಿ ಸೇರಿದಂತೆ ಇಲಾಖೆಯ ಸೇವೆಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ.ಈ ಬಗ್ಗೆ ಪರಿಣಿತರ ತಂಡ ಪರಿಶೀಲನೆ ನಡೆಸಿದೆ.ಈ ವೇಳೆ ದುಷ್ಕರ್ಮಿಗಳ ಕೃತ್ಯ ಬಯಲಾಗಿದೆ.
ತಂತ್ರಾಂಶ ಹ್ಯಾಕ್ ಆಗಿರುವ ಕುರಿತಂತೆ ಖಚಿತ ಮಾಹಿತಿ ಪಡೆದಿರುವ ನೊಂದಣಿ ಮಹಾ ನಿರೀಕ್ಷಕ (ಐಜಿಆರ್) ಕೆ.ಎ.ದಯಾನಂದ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ರಾಜ್ಯ ಸರ್ಕಾರದ ಹಿರಿಯ ಅಧಿಕಾರಿ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಕೇಂದ್ರ ಸಿಇಎನ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸರ್ವರ್ ಸಮಸ್ಯೆೆಯಿಂದ ಕಳೆದ ಕೆಲ ದಿನಗಳಿಂದ ರಾಜ್ಯದ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ರಿಜಿಸ್ಟ್ರೇಷನ್ ಕಾರ್ಯ ಸ್ಥಗಿತಗೊಂಡಿತ್ತು. ಈ ಹಿನ್ನೆೆಲೆಯಲ್ಲಿ ಐಜಿಆರ್ ಪರಿಶೀಲಿಸಿದಾಗ ದುರುದ್ದೇಶದಿಂದ ಅಪರಿಚಿತರು ಕಾವೇರಿ 2.0 ಸಾಫ್ಟ್ವೇರ್ ಅನ್ನು ಹ್ಯಾಕ್ ಮಾಡಿ, ವೆಬ್‌ಸೈಟ್ ಪ್ರವೇಶಿಸಿ ಅದರಲ್ಲಿರುವ ಡೇಟಾಗಳನ್ನು ಕಳವು ಮಾಡಲು ನಕಲಿ ಖಾತೆಗಳನ್ನು ತೆರೆದಿರುವುದು ಪತ್ತೆಯಾಗಿದೆ.
ಈ ಕುರಿತು ಸ್ಮಾರ್ಟ್ ಗವರ್ನನೆನ್ಸ್ ಸೆಂಟರ್ (ಸಿಎಸ್‌ಜಿ) ಈ ರೀತಿಯ 62 ಇ-ಮೇಲ್ ಖಾತೆಗಳು ಹಾಗೂ ಅವುಗಳ ಐಪಿ ವಿಳಾಸಗಳ ಪಟ್ಟಿಯನ್ನು ನೀಡಿದೆ.
ಕಳೆದ ತಿಂಗಳು ಸೈಬರ್ ದಾಳಿಕೋರರು ಹ್ಯಾಕ್ ಮಾಡಿದ್ದು, ಕಾವೇರಿ ವೆಬ್‌ಸೈಟ್‌ನಲ್ಲಿ ಸರ್ವರ್ ಸಮಸ್ಯೆೆ ಉಂಟಾಗಿತ್ತು. ಆಗ ಸಾಮಾನ್ಯ ದಿನಗಳಿಗಿಂತ 8 ಪಟ್ಟು ಹೆಚ್ಚಾಗಿತ್ತು. ಕೆಲವು ಹಂತಗಳಲ್ಲಿ ಕೇವಲ ಎರಡು ಗಂಟೆಗಳ ಅವಧಿಯಲ್ಲಿ ದುರುದ್ದೇಶಪೂರಿತ ಬಳಕೆದಾರರಿಂದ 6.2 ಲಕ್ಷ ವಿನಂತಿಗಳನ್ನು ಸ್ವೀಕರಿಸಲಾಗಿದೆ ಎಂದು ಸಿಎಸ್‌ಜಿ ವರದಿ ನೀಡಿತ್ತು. ಸರ್ಕಾರಿ ವೆಬ್‌ಸೈಟ್‌ಗಳನ್ನು ಗುರಿಯಾಗಿಕೊಂಡು ಸೈಬರ್ ದಾಳಿ ನಡೆದಿದೆ.
ಹೀಗಾಗಿ, ಸರ್ಕಾರ ವೆಬ್‌ಸೈಟ್ ಹ್ಯಾಕ್ ಮಾಡಿದ ಅಪರಿಚಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದಯಾನಂದ್ ದೂರಿನಲ್ಲಿ ಕೋರಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ ಎಂದು ಸಿಇಎನ್ ಠಾಣೆ ಪೊಲೀಸರು ಹೇಳಿದ್ದಾರೆ.




