ಅವಳಿ ನಿರ್ದೇಶಕರ ಅನಾವರಣ ಚಿತ್ರ ಬಿಡುಗಡೆಗೆ ಸಿದ್ಧ

2 years ago

#Anavarana #sandalwood #entertainment #film #twin #director #ready #release

ಅನಾವರಣ ಚಿತ್ರದ ಮತ್ತೊಂದು ಹಾಡು ಬಿಡುಗಡೆ

ಅರ್ಜುನ್ ಯೋಗಿ ಹಾಗೂ ಸಾರಿಕಾ ರಾವ್ ಜೋಡಿಯ ಸಿನಿಮಾ

ಹರೀಶ್ ಕುಮಾರ್ ಹಾಗೂ ಮಂಜುನಾಥ್ ಪಿಳ್ಳಪ್ಪ ಜಂಟಿ ನಿರ್ದೇಶನ

ನಮ್ಮ ಸಿನಿಮಾ ಬ್ಯಾನರ್ ಅಡಿಯಲ್ಲಿ ಅದ್ವೈತ್ ಪ್ರಭಾಕರ್, ಆರ್.ರಾಮಚಂದ್ರ, ಸತ್ಯ ರಾಣಿ, ರಚನಾ ಬಿ. ಹೆಚ್ ನಿರ್ಮಾಣದ ಅನಾವರಣ ಸಿನಿಮಾದ ಎರಡನೇ ಹಾಡು ಬಿಡುಗಡೆಯಾದಂತಾಗಿದೆ. ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿದ್ದ ಏನಾಗಿದೆ ಎಂಬ ಹಾಡು ಸಾಕಷ್ಟು ಫೇಮಸ್ ಆಗಿತ್ತು.

ಈಗ ಬಿಡುಗಡೆ ಆಗಿರುವ ದೇವರೇ ಎಂಬ ಗೀತೆ ಗಾನಬಜಾನ ಬಿಡುಗಡೆಯಾಗಿದೆ. ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ, ಹರೀಶ್ ಕುಮಾರ್ ಬಿ.ಕೆ ಹಾಗೂ ಮೇಘನಾ ಕುಲಕರ್ಣಿ ಜೋಶಿ ಕಂಠ ದಾನ ಈ ಹಾಡಿಗಿದೆ. ನಾಯಕ ಮತ್ತು ನಾಯಕಿ ಆಗಿ ನಟಿಸಿರುವ ಅರ್ಜುನ್ ಯೋಗಿ ಹಾಗೂ ಸಾರಿಕಾ ರಾವ್ ರೀ ದೇವರೇ ಹಾಡಿಗೆ ನೃತ್ಯ ಮಾಡಿದ್ದಾರೆ.

ತಾರಾಗಣದಲ್ಲಿ ಗೌರೀಶ್ ಅಕ್ಕಿ, ನಂದ ಗೋಪಾಲ್, ಹೊನ್ನವಳ್ಳಿ ಕೃಷ್ಣ, ರಥಸಪ್ತಮಿ ಅರವಿಂದ್, ಕಾಮಿಡಿ ಕಿಲಾಡಿ ಸೂರಜ್, ಸೂರ್ಯ, ಸಂತು, ವಾಣಿ, ರಾಜೇಶ್ವರಿ, ಕಮಲಾ, ಯುಕ್ತಾ, ಧರಣಿ ಕುಮಾರ್, ಸಿದ್ಧಿವಿನಾಯಕ, ಗಿರೀಶ್ ಯು.ಬಿ, ಶಿವರಾಜ್, ರಂಗೋಲಿ ವಿಜಿ, ಬೇಬಿ ಧೃತಿ ಶುತ್ವ ಮತ್ತು ಅಭಿ ಕಾಣಿಸಿಕೊಂಡಿದ್ದಾರೆ.

ರಂಗ ಕಲಾವಿದ, ನಿರ್ದೇಶಕ ಹರೀಶ್ ಕುಮಾರ್ ಹಾಗೂ ಮಂಜುನಾಥ್ ಪಿಳ್ಳಪ್ಪ ಅನಾವರಣ ಚಿತ್ರದ ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಈ ಮೂಲಕ ಅವಳಿ ನಿರ್ದೇಶನ ಪದ್ಧತಿಗೆ ಚಂದನವನದಲ್ಲಿ ಮತ್ತೊಮ್ಮೆ ಚಾಲನೆ ಸಿಕ್ಕಂತಾಗಿದೆ. 40ಕ್ಕೂ ಹೆಚ್ಚು ಕಿರುಚಿತ್ರಗಳನ್ನು ರೂಪಿಸಿರುವ ಅನುಭವ ಇವರಿಗಿದೆ.

ವೆಂಕಿ ಸಂಕಲನ, ಡಾ.ವಿ.ನಾಗೇಂದ್ರ ಪ್ರಸಾದ್ ಮತ್ತು ಶಶಿಕುಮಾರ್ ಬೆಳಕವಾಡಿ ಸಾಹಿತ್ಯ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಹಿನ್ನೆಲೆ ಸಂಗೀತ ಬಿ.ಆರ್.ಹೇಮಂತ್ ಕುಮಾರ್, ವಿಶಾಲ್ ಸಿ ಕೃಷ್ಣ ಸಂಗೀತ, ನಂದಕುಮಾರ್ ಛಾಯಾಗ್ರಹಣ, ಮದನ್ ಹರಿಣಿ ಮತ್ತು ರಾಮ್ಜ್ ನೃತ್ಯ ಸಂಯೋಜನೆ ಅಡಿಯಲ್ಲಿ ಸಿನಿಮಾ ನಿರ್ಮಾಣ ಆಗಿದೆ.

ಅನಾವರಣ ಸಿನಿಮಾ ಡಿಸೆಂಬರ್ 1ಕ್ಕೆ ರಾಜ್ಯಾದ್ಯಂತ ಬಿಡುಗಡೆ ಆಗಲಿದ್ದು, ವಿಜಯ್ ಸಿನಿಮಾಸ್ ಬಿಡುಗಡೆ ಮಾಡಲಿದ್ದಾರೆ. ಫ್ಯಾಮಿಲಿ ಡ್ರಾಮಾ ಜೊತೆಗೆ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿದೆ ಎಂದು ಚಿತ್ರ ತಂಡ ಹೇಳಿದೆ.

ನಟ ಅರ್ಜುನ್ ಯೋಗಿ ಕಿರುತೆರೆಯಲ್ಲಿ ಹೆಸರು ಮಾಡಿದವರು. ಕಿರುತೆರೆಯಲ್ಲಿ ಅಭಿನಯದ ಮೂಲಕ ಕಿರುತೆರೆ ಪ್ರಿಯರನ್ನು ರಂಜಿಸಿ, ಇದೀಗ ಬೆಳ್ಳಿತೆರೆಯಲ್ಲೂ ತೊಡಗಿಸಿಕೊಂಡಿದ್ದಾರೆ. ಕೆಲವು ರಿಯಾಲಿಟಿ ಶೋಗಳಲ್ಲಿಯೂ ಇವರು ಕಾಣಿಸಿಕೊಂಡಿದ್ದಾರೆ.

Leave a Reply