ಬೆಂಗಳೂರು: ರಾಜ್ಯದಲ್ಲಿ ತೀವ್ರ ಕೋಲಾಹಲ ಮತ್ತು ಆಕ್ರೋಶ ಸೃಷ್ಟಿಗೆ ಕಾರಣವಾಗಿದ್ದ ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಪೊಲೀಸರ ಬಲೆಗೆ ಬಿದ್ದಿದ್ದಾನೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಹತ್ಯೆ ನಡೆದ ನಂತರ ಪರಾರಿಯಾಗಿದ್ದ ಪಾತಕಿ ಗಿರೀಶ್ ಪೊಲೀಸ್ ಬಲೆಗೆ ಬಿದ್ದಿರುವ ರೀತಿಯೇ ರೋಚಕವಾಗಿದೆ. ಅಂಜಲಿ ಅಂಬಿಗೇರ ಹತ್ಯೆ ಬಳಿಕ ಆ ಸ್ಥಳದಿಂದ ಪರಾರಿಯಾಗಿದ್ದ ಆರೋಪಿ ಗಿರೀಶ್, ವಿಶ್ವಮಾನವ ಎಕ್ಸ್ಪ್ರೆಸ್ ರೈಲಿನಲ್ಲಿ ಸಂಚರಿಸುತ್ತಿದ್ದಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ತುಮಕೂರು ಮೂಲದ ಮಹಿಳೆಯೊಬ್ಬರ ಜತೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿದ್ದಾನೆ. ಈ ವೇಳೆ ತಾಳ್ಮೆ ಕಳೆದುಕೊಂಡು ಆ ಮಹಿಳೆಗೆ ಚಾಕು ತೊರಿಸಿದ್ದಾನೆ. ಇದರಿಂದ ರೈಲಿನಲ್ಲಿದ್ದ ಸಹ ಪ್ರಯಾಣಿಕರು ರೊಚ್ಚಿಗೆದ್ದು, ಆತನನ್ನು ಹಿಡಿದು ಥಳಿಸಿದ್ದರು.
ನಂತರ ಆತ ದಾವಣಗೆರೆ ತಾಲೂಕಿನ ಮಾಯಕೊಂಡ ರೈಲು ನಿಲ್ದಾಣದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ರೈಲಿನಿಂದ ಜಿಗಿದು ತಪ್ಪಿಸಿಕೊಳ್ಳುವುದಕ್ಕೆ ಯತ್ನಿಸಿದ್ದ. ಈ ವೇಳೆ, ಸಹ ಪ್ರಯಾಣಿಕರು ಸಂಶಯ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ನಂತರ ಪರಿಶೀಲನೆ ನಡೆಸಿದ ರೈಲ್ವೆ ಪೊಲೀಸರು, ಈತನನ್ನು ಅಂಜಲಿ ಹತ್ಯೆ ಆರೋಪಿ ಎಂದು ಗುರುತು ಹಿಡಿದು ಹುಬ್ಬಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮಾಯಕೊಂಡಕ್ಕೆ ಬಂದ ಹುಬ್ಬಳ್ಳಿ ಪೊಲೀಸರು ತಡರಾತ್ರಿ ಆರೋಪಿಯನ್ನು ಬಂಧಿಸಿ ಕರೆದೊಯ್ದಿದ್ದಾರೆ.
ಆರೋಪಿ ಗಿರೀಶ್ ಮೈಸೂರಿನ ಮಹಾರಾಜ್ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ. ಯುವತಿ ಅಂಜಲಿ ಮತ್ತು ಆರೋಪಿ ಪರಸ್ಪರ ಪ್ರೀತಿಸುತ್ತಿದ್ದರು.15 ದಿನಗಳ ಹಿಂದೆ ದೇವಸ್ಥಾನದಲ್ಲಿ ಮದುವೆಯಾಗಿದ್ದಾಗಿಯೂ ಕೆಲವು ಮೂಲಗಳು ಮಾಹಿತಿ ನೀಡಿವೆ. ವಾರದ ಮುಂಚೆ ಯುವತಿ 2 ಸಾವಿರ ರೂ. ಹಣ ಕೇಳಿದ್ದಳು. ಗಿರೀಶ್ ಒಂದು ಸಾವಿರ ರೂಪಾಯಿ ಫೋನ್ ಪೇ ಮಾಡಿದ್ದ. ಆ ನಂತರ ನಿನ್ನ ಜೊತೆ ಯಾವುದೇ ಸಂಬಂಧ ಬೇಡ ಎಂದು ಹೇಳಿ ಆಕೆ ಗಿರೀಶನ ನಂಬರ್ ಅನ್ನು ಅಂಜಲಿ ಬ್ಲಾಕ್ ಲಿಸ್ಟ್ ಮಾಡಿದ್ದರು ಎನ್ನಲಾಗಿದೆ.
ಆ ಬಳಿಕ ಯಾವುದೇ ಫೋನ್ ಕರೆ ಕೂಡ ಸ್ವೀಕರಿಸುತ್ತಿರಲಿಲ್ಲ. ಇದರಿಂದ ಆರೋಪಿ ಸಿಟ್ಟಿಗೆದ್ದು ಮೈಸೂರಿನಿಂದ ಹುಬ್ಬಳ್ಳಿಗೆ ಬಂದು ಕೊಲೆ ಮಾಡಿದ್ದಾನೆ. ಅಲ್ಲಿಂದ ಹುಬ್ಬಳ್ಳಿ ಹೊಸ ಬಸ್ ನಿಲ್ದಾಣಕ್ಕೆ ಬಂದು ಹಾವೇರಿಗೆ ತಲುಪಿದ್ದ. ಹಾವೇರಿಯಿಂದ ಮೈಸೂರಿಗೆ ಹೋಗಿ ಮಹಾರಾಜ್ ಹೋಟೆಲ್ಲಿನಲ್ಲಿ ಮಲಗಿದ್ದ.
ಇದಾದ ಬಳಿಕ ಆತ ಮೈಸೂರಿನಿಂದ ಹುಬ್ಬಳ್ಳಿಗೆ ವಾಪಸ್ ಆಗಲು ಬರುತ್ತಿದ್ದಾಗ ಗೊಂದಲ ಮಾಡಿಕೊಂಡು ರೈಲ್ವೆ ಪೊಲೀಸರ ವಶಕ್ಕೆ ಬಿದ್ದಿದ್ದಾನೆ.
ಈ ನಡುವೆ ಮಾಧ್ಯಮಗಳ ಜೊತೆ ಮಾತನಾಡಿದ ಹುಬ್ಬಳ್ಳಿ ಪೋಲೀಸ್ ಕಮಿಷನರ್ ರೇಣುಕಾ ಸುಕುಮಾರ್, ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣದ ಹಿನ್ನಲೆಯಲ್ಲಿ ಆರೋಪಿ ಪತ್ತೆಗಾಗಿ ಎಂಟು ತಂಡವನ್ನು ರಚನೆ ಮಾಡಿದ್ದೆವು. ನಿನ್ನೆ ರೈಲ್ವೆ ಪೋಲಿಸರ ಸಹಾಯದಿಂದ ಆರೋಪಿಯನ್ನು ಬಂಧಿಸಲಾಗಿದೆ ಎಂದರು.
ಆರೋಪಿ ಗಿರೀಶ್ ತಲೆ ಮತ್ತು ಬೆನ್ನಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಕೋಮಾ ಸ್ಥಿತಿಯಲ್ಲಿದ್ದಾನೆ. ರೈಲಿನಿಂದ ಏಕೆ ಕೆಳಗೆ ಬಿದ್ದ ಎಂಬುದನ್ನು ಆತನ ಹೇಳಿಕೆಯ ನಂತರವಷ್ಟೇ ತಿಳಿಯಬಹುದು ಎಂದರು.




