ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಅಂಜಲಿ ನಿಂಬಾಳ್ಕರ್

2 years ago

ಬೆಂಗಳೂರು: 2024ರ ಲೋಕಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲು ಆಯೋಗ ಸಜ್ಜುಗೊಂಡಿರುವ ಬೆನ್ನೆಲ್ಲೇ ನಡೆಯುತ್ತಿರುವ ರಾಜಕೀಯ ಚಟುವಟಿಕೆಗಳು ಕುತೂಹಲ ಮೂಡಿಸಿವೆ.

ಬೆಳಗಾವಿ ಜಿಲ್ಲೆಯ ಖಾನಾಪುರ ವಿಧಾನಸಭಾ ಕ್ಷೇತ್ರದ  ಮಾಜಿ ಶಾಸಕಿ ಹಾಗೂ ಕಾಂಗ್ರೆಸ್ ನಾಯಕಿ ಅಂಜಲಿ ನಿಂಬಾಳ್ಕರ್ ಅವರು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ಅಂಜಲಿ ನಿಂಬಾಳ್ಕರ್ ಅವರನ್ನು ಕಣಕ್ಕಿಳಿಸಲು ರಾಜ್ಯ ನಾಯಕರು ನಿರ್ಧರಿಸಿದ್ದು, ಬಹುತೇಕ ಹೈಕಮಾಂಡ್ ಇದಕ್ಕೆ ಅನುಮೋದನೆ ನೀಡುವ ಸಾಧ್ಯತೆ ಇದೆ.

ಈ ಕ್ಷೇತ್ರದಿಂದ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಸಿದ್ಧತೆಗಳು ನಡೆದಿದ್ದವು. ಆದರೆ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಶಿವರಾಮ್ ಹೆಬ್ಬಾರ್ ಅವರು ತಕ್ಷಣಕ್ಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಲು ನಿರಾಕರಿಸಿದ್ದಾರೆ ಎಂದು ಗೊತ್ತಾಗಿದೆ.

ಸದ್ಯಕ್ಕೆ ತಾವು ಕಾಂಗ್ರೆಸ್ ಸೇರಲು ಸಾಧ್ಯವಿಲ್ಲ. ಆದರೆ, ಕಾರವಾರ ಲೋಕಸಭಾ ಕ್ಷೇತ್ರದಿಂದ ಅಂಜಲಿ ನಿಂಬಾಳ್ಕರ್ ಅವರು ಕಣಕ್ಕಿಳಿದಿದ್ದೆ ಆದಲ್ಲಿ ಯಲ್ಲಾಪುರ, ಶಿರಸಿ ಮತ್ತು ಅಂಕೋಲಾ ವಿಧಾನಸಭಾ ಕ್ಷೇತ್ರಗಳಿಂದ ಹೆಚ್ಚಿನ ಮತ ಬರುವಂತೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

Leave a Reply