“ಕರ್ನಾಟಕ ರತ್ನ ಎಸ್.ಎಂ.ಕೃಷ್ಣ”
ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಶಾಸಕ, ಸಚಿವ, ಸ್ಪೀಕರ್, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.
ಶ್ರೀ ಎಸ್.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ʼಕರ್ನಾಟಕ ರತ್ನʼ (ಮರಣೋತ್ತರ) ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ. ಆದ್ದರಿಂದ ತಾವು ಈ ಸಲಹೆಯನ್ನು ಪರಿಗಣಿಸಿ ಶ್ರೀಯುತರಿಗೆ ʼಕರ್ನಾಟಕ ರತ್ನʼ ನೀಡಿ ಗೌರವ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಶ್ರೀ @siddaramaiah ಅವರಲ್ಲಿ ಮನವಿ ಮಾಡುತ್ತಿದ್ದೇನೆ.
– ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ




