ಬೆಂಗಳೂರು : ಸಂಚಾರಿ ನಿಯಮಗಳನ್ನು ಉಲ್ಲಂಘಿಸಿರುವ ವಾಹನಗಳ ಮಾಲೀಕರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಸಿಹಿ ಸುದ್ದಿ ನೀಡಿದೆ. ಹೈಕೋರ್ಟ್ ಲೋಕ್ ಅದಾಲತ್ ನೀಡಿದ ಆದೇಶದ ಅನ್ವಯ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡದಲ್ಲಿ ಶೇಕಡ 50ರಷ್ಟು ಪಾವತಿಸಿಕೊಳ್ಳಲು ಮತ್ತೊಮ್ಮೆ ಅವಕಾಶ ನೀಡಲು ತೀರ್ಮಾನಿಸಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ತಕ್ಷಣದಿಂದಲೇ ರಾಜ್ಯಾದ್ಯಂತ ಜಾರಿಗೆ ಬರಲಿರುವ ಈ ನಿಯಮ ಬರುವ ಡಿಸೆಂಬರ್ 12ರ ವರೆಗೆ ಜಾರಿಯಲ್ಲಿ ಇರಲಿದೆ ಎಂದು ಸರ್ಕಾರದ ಆದೇಶ ತಿಳಿಸಿದೆ. ಚಾಲಕರು ಈ ಅವಧಿಯೊಳಗೆ ತಮ್ಮ ಬಾಕಿ ಇರುವ ಸಂಚಾರ ದಂಡಗಳನ್ನು ಶೇಕಡ 50 ರಷ್ಟು ರಿಯಾಯಿತಿಯಲ್ಲಿ ಪಾವತಿಸಬಹುದು.
ರಾಜ್ಯದ ಯಾವುದೇ ಭಾಗದಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ದಂಡ ಬಾಕಿ ಇಟ್ಟಿರುವ ವಾಹನಚಾಲಕರು ಆನ್‌ಲೈನ್ (echallan), ಆಪ್ ಮೂಲಕ ಅಥವಾ RTO/ ಟ್ರಾಫಿಕ್ ಪೊಲೀಸ್ ಕಚೇರಿಯಲ್ಲಿ ಪಾವತಿಸಬಹುದಾದ ದಂಡ ಮೊತ್ತಗಳು ಅಪರಾಧಿ ಪ್ರಕರಣಗಳಿಗೆ ಸಂಬಂಧಿಸಿದ ದಂಡಗಳಿಗೆ ಮಾತ್ರ ಈ ಸಡಿಲಿಕೆ ಅನ್ವಯಿಸುವುದಿಲ್ಲ ಎಂದು ಹೇಳಿದೆ.




