ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸಹೋದರಿ ಎಂದು ವಂಚಿಸಿದ್ದ ಖತರ್ನಾಕ್ ವಂಚಕಿ ಐಶ್ವರ್ಯ ಗೌಡ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಬರೋಬ್ಬರಿ 2.52 ಕೋಟಿ ನಗದು ಹಾಗೂ 2.350 ಕೆಜಿ ಚಿನ್ನಾಭರಣ ಪಡೆದು ಐಶ್ವರ್ಯ ಗೌಡ ವಂಚನೆ ಮಾಡಿದ್ದಾಳೆ ಎಂದು ವೈದ್ಯೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ಹಣ ಮತ್ತು ಚಿನ್ನಾಭರಣಗಳು ಸೇರಿದಂತೆ 5.03 ಕೋಟಿ ರೂ ವಂಚಿಸಿರುವುದಾಗಿ ಸ್ತ್ರೀ ರೋಗ ತಜ್ಞೆ ಡಾ.ಮಂಜುಳಾ ಪಾಟೀಲ್ ಅವರು ಆರ್.ಆರ್.ನಗರ ಠಾಣೆಗೆ ದೂರು ನೀಡಿದ್ದು, ಐಶ್ವರ್ಯಾ ಗೌಡ, ಅವರ ಪತಿ ಹರೀಶ್ ಕೆ.ಎನ್, ಕಾರು ಚಾಲಕ ಧನಂಜಯ್ ಹಾಗೂ ಅಶ್ವಥ್ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆಯಾಗಿರುವ ಮಂಜುಳಾ ಪಾಟೀಲ್ ಅವರಿಗೆ 2020-21ನೇ ಸಾಲಿನಲ್ಲಿ ಚಿಕಿತ್ಸೆಗಾಗಿ ಬರುತ್ತಿದ್ದಾಗ ಐಶ್ವರ್ಯಾ ಗೌಡ ಪರಿಚಯವಾಗಿತ್ತು. ತಾನು, ಡಿ.ಕೆ.ಸುರೇಶ್ ಹಾಗೂ ಡಿ.ಕೆ.ಶಿವಕುಮಾರ್ ಅವರ ಸಹೋದರಿ ಎಂದು ಪರಿಚಯಿಸಿಕೊಂಡು, ತನಗೆ ದೊಡ್ಡಮಟ್ಟದಲ್ಲಿ ರಿಯಲ್ ಎಸ್ಟೇಟ್, ಗೋಲ್ಡ್ ಬ್ಯುಸಿನೆಸ್, ಕೆಸಿನೋ ವ್ಯವಹಾರ ಇರುವುದಾಗಿ ನಂಬಿಸಿದ್ದಳು.
2022ರಿಂದ 2024ರವೆಗೂ ಹೂಡಿಕೆ, ಮತ್ತಿತರ ಕಾರಣಗಳನ್ನು ನೀಡಿ ಹಂತಹಂತವಾಗಿ 2.52 ಕೋಟಿ ರೂ. ಹಣ ಹಾಗೂ 2.50 ಕೋಟಿ ಮೌಲ್ಯದ ಒಟ್ಟು 2 ಕೆ.ಜಿ 350 ಗ್ರಾಂ ಚಿನ್ನಾಭರಣ ಪಡೆದಿದ್ದ ಐಶ್ವರ್ಯಾ ಗೌಡ ಹಿಂದಿರುಗಿಸದೇ ಸಬೂಬು ಹೇಳುತ್ತಿದ್ದಳು.
ಈ ನಡುವೆ ಇತ್ತೀಚಿಗೆ ಐಶ್ವರ್ಯಾ ಗೌಡ ಮತ್ತಿತರ ವಿರುದ್ಧ ಚಂದ್ರಾ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ಹಾಗೂ ಆರೋಪಿಗಳು ಜಾಮೀನು ಪಡೆದಿರುವುದು ಮಂಜುಳಾ ಪಾಟೀಲ್ ಅವರ ಗಮನಕ್ಕೆ ಬಂದಿತ್ತು.
ಕಳೆದ ಜನವರಿ 1ರಂದು ಮಂಜುಳಾ ಪಾಟೀಲ್ ಅವರ ಮನೆ ಬಳಿ ತೆರಳಿದ್ದ ಚಾಲಕ ಧನಂಜಯ್, ಐಶ್ವರ್ಯಾ ಗೌಡಗೆ ಕರೆ ಮಾಡಿ ಕೊಟ್ಟಿದ್ದ. ಫೋನ್ನಲ್ಲಿ ಮಾತನಾಡಿದ್ದ ಐಶ್ವರ್ಯಾ ಗೌಡ, ನಿನಗೆ ಕೊಡಬೇಕಿರುವ ಹಣ, ಚಿನ್ನಾಭರಣದ ಕುರಿತು ಯಾರಿಗೂ ಹೇಳಬಾರದು, ದೂರು ನೀಡಬಾರದು. ಹಾಗೇನಾದರೂ ದೂರು ನೀಡಿದರೆ, ಸಾಕ್ಷಿ ಹೇಳಿಕೆ ನೀಡಿದರೆ ಕೊಡಬೇಕಿರುವ ಹಣ ಚಿನ್ನಾಭರಣ ಕೊಡುವುದಿಲ್ಲ. ನಾನು ಡಿ.ಕೆ.ಸುರೇಶ್ ಹಾಗೂ ಡಿ.ಕೆ.ಶಿವಕುಮಾರ್ ಅವರ ಸಹೋದರಿ ಎಂಬುದು ಗೊತ್ತಿದೆ ತಾನೆ? ಎಂದು ಬೆದರಿಕೆ ಹಾಕಿರುವುದಾಗಿ ಮಂಜುಳಾ ಪಾಟೀಲ್ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಸಂಬಂಧ ಆರ್ಆರ್ನಗರ ಪೊಲೀಸ್ ಠಾಣೆಯಲ್ಲಿ ಐಶ್ವರ್ಯಗೌಡ ಹಾಗು ಇಬ್ಬರು ಡ್ರೈವರ್ಗಳಾದ ಅಶ್ವಥ್ ಗೌಡ ಹಾಗೂ ಧನಂಜಯ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ.


