ಬೆಂಗಳೂರು: ಲೈಂಗಿಕ ದೌರ್ಜನ್ಯ, ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಬಂಧನದ ಭೀತಿಯಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿರುವುದರಿಂದ ಪ್ರಜ್ವಲ್ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಮೈಸೂರಿನ ಕೆಆರ್ ನಗರದಲ್ಲಿ ಮಹಿಳೆಯನ್ನು ಅಪಹರಣ ಮಾಡಿದ ಆರೋಪದ ಜೊತೆ ಅತ್ಯಾಚಾರ ಪ್ರಕರಣಕ್ಕೂ ನಂಟಿದೆ ಎನ್ನಲಾಗಿದೆ. ಪ್ರಜ್ವಲ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿರುವ ಪೊಲೀಸರು ಸಂತ್ರಸ್ತೆಯನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ನಂತರ ಸಂತ್ರಸ್ತೆಯನ್ನು ಚನ್ನರಾಯಪಟ್ಟಣದ ಗನ್ನಿಕಡ ತೋಟದ ಮನೆಯಲ್ಲಿ ಸ್ಥಳ ಮಹಜರು ನಡೆಸಲಾಗಿದೆ. ಸಂತ್ರಸ್ತೆ ಕೆಲಸ ಮಾಡುವ ಸಂದರ್ಭದಲ್ಲಿ ಪ್ರಜ್ವಲ್, ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಮೂಲಗಳು ತಿಳಿಸಿವೆ.
ಕೆಲ ದಿನಗಳ ಹಿಂದೆ ಎಸ್ಐಟಿ ಮುಂದೆ ಮೂವರು ಸಂತ್ರಸ್ತೆಯರು ಹಾಜರಾಗಿ ಪ್ರಜ್ವಲ್ ಎಸಗಿದ ಪೈಶಾಚಿಕ ಕೃತ್ಯದ ಬಗ್ಗೆ ಮಾಹಿತಿ ನೀಡಿದ್ದರು. ಇದರಲ್ಲಿ ಹಾಸನ ಮೂಲದ ಜೆಡಿಎಸ್ ನಾಯಕಿಯೂ, ಮಾಜಿ ಚುನಾಯಿತ ಪ್ರತಿನಿಧಿಯೂ ಆದ ಮಧ್ಯವಯಸ್ಸಿನ ಸಂತ್ರಸ್ತೆ, “ಸಂಸದರ ಅಧಿಕೃತ ಸರಕಾರಿ ನಿವಾಸದಲ್ಲಿಯೇ ಪ್ರಜ್ವಲ್ ತನ್ನ ಮೇಲೆ ಅತ್ಯಾಚಾರ ಕೃತ್ಯ ಎಸಗಿದ್ದಾರೆ” ಎಂದು ಆರೋಪಿಸಿದ್ದರು. ಇದರಿಂದ ಸರಕಾರದ ಅಧಿಕಾರ ದುರ್ಬಳಕೆ ಮಾಡಿಕೊಂಡು ಮಹಿಳೆಯನ್ನು ಒತ್ತೆಯಾಳಾಗಿಸಿಕೊಂಡು ಅತ್ಯಾಚಾರ ಎಸಗಿದ ಆರೋಪದನ್ವಯ ಪ್ರಜ್ವಲ್ ವಿರುದ್ಧ 3ನೇ ಎಫ್ಐಆರ್ ದಾಖಲಾಗಿದೆ.




