ಬೆಂಗಳೂರು: ಕೆಪಿಸಿಸಿ ಕಾರ್ಮಿಕ ಘಟಕಕಕ್ಕೆ ನೂತನವಾಗಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ಲಕ್ಷ್ಮೀವೆಂಕಟೇಶ್ ಅವರಿಗೆ ರಾಜ್ಯದ ಹಲವು ಮುಖಂಡರು, ಮಹಿಳಾ ಕಾರ್ಯಕರ್ತರು ಮತ್ತು ಕಾರ್ಮಿಕ ಘಟಕದವರು ಆಗಮಿಸಿ ಶುಭ ಕೋರಿದರು.
ಇದೇ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಲಕ್ಷ್ಮೀ ವೆಂಕಟೇಶ್ ಮಾತನಾಡಿ, ಯುವ ನಾಯಕ ರಾಹುಲ್ ಗಾಂಧಿ, ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ, ಸಿದ್ದರಾಮಯ್ಯ, INTUC ರಾಷ್ಟ್ರೀಯ ಅಧ್ಯಕ್ಷ ಸಂಜೀವ್ ಅವರ ಸಹಕಾರ, ಬೆಂಬಲದಿಂದ ರಾಜ್ಯದಲ್ಲಿ ಕಾರ್ಮಿಕರ ಸಂಘಟನೆ ಮತ್ತು ಕಾರ್ಮಿಕರ ಸಮಸ್ಯೆಗಳಿಗೆ ಹೋರಾಟ ಮಾಡಲಾಗುವುದು ಎಂದರು.
ಅನ್ನ ನೀಡುವ ರೈತ, ದೇಶ ಕಾಯುವ ಸೈನಿಕರು ಕಾರ್ಮಿಕರು ದೇಶ ಅಭಿವೃದ್ದಿಗೆ ತಮ್ಮ ಜೀವನ ಮುಡಿಪಾಗಿಡುತ್ತಾರೆ. ಕೇಂದ್ರ ಮತ್ತು ರಾಜ್ಯ ಬಿ.ಜೆ.ಪಿ. ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳಿಂದ ಕೊಟ್ಯಂತರ ಕಾರ್ಮಿಕರು ಬೀದಿ ಪಾಲಾಗಿದ್ದಾರೆ ಎಂದರು.
ಕೊರೋನ ಸಂಕಷ್ಟದ ಸಮಯದಲ್ಲಿ ಕಾರ್ಮಿಕರ ಸಂಕಷ್ಟಗಳಿಗೆ ಕೆ.ಪಿ.ಸಿ.ಸಿ. ವತಿಯಿಂದ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಕಾರ್ಮಿಕ ಕುಟುಂಬಗಳಿಗೆ ದಿನಸಿ ಕಿಟ್, ಔಷಧಿ ಸಾಮಗ್ರಿಗಳ ವಿತರಣೆ ಮತ್ತು ಕೊವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ಧನ ವಿತರಿಸಲಾಯಿತು. ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಟ್ಟ ಬಹುಮತದಿಂದ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದರು
ಬಡವರ, ಕಾರ್ಮಿಕರ ಪರ ಸದಾ ಹೋರಾಟ ಮಾಡುವ ಪಕ್ಷ ಕಾಂಗ್ರೆಸ್. ಪಕ್ಷ ಹೊಸ ಚಿಂತನೆ, ಭರವಸೆಯಿಂದ ರಾಷ್ಟ್ರದಾದ್ಯಂತ ಸಂಚಲನ ಮೂಡಿಸಿದೆ ಎಂದರು.




