ಬೆಂಗಳೂರು: ಬಿಜೆಪಿ ರಾಜ್ಯ ಅಧ್ಯಕ್ಷರ ಆಯ್ಕೆ ಕುರಿತ ವಿಚಾರ ಇದೀಗ ತೀವ್ರ ಕುತೂಹಲ ಮೂಡಿಸಿದೆ. ಹಾಲಿ ಅಧ್ಯಕ್ಷ ವಿಜಯೇಂದ್ರ ಅವರನ್ನು ಮುಂದುವರಿಸಬೇಕು. ಹಾಗೆಯೇ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಬೇಕು ಎಂದು ಅವರ ಆಪ್ತ ಬಣ ವರಿಷ್ಠರನ್ನು ಆಗ್ರಹಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಮತ್ತೊಂದೆಡೆ ಯಾವುದೇ ಕಾರಣಕ್ಕೂ ವಿಜಯೇಂದ್ರ ಅವರನ್ನು ಆ ಹುದ್ದೆಯಲ್ಲಿ ಮುಂದುವರಿಸಬಾರದು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುವ ಪ್ರಭಾವಿ ನಾಯಕನೊಬ್ಬರನ್ನು ಈ ಹುದ್ದೆಗೆ ನೇಮಕ ಮಾಡಬೇಕು ಎಂದು ವಿರೋಧಿ ಬಣ ಪಟ್ಟು ಹಿಡಿದಿದೆ.
ರಾಜ್ಯ ಬಿಜೆಪಿ ಸಾಂಸ್ಥಿಕ ಚುನಾವಣೆಗಳು ಹಾಗೂ ಇನ್ನಿತರ ವಿದ್ಯಮಾನಗಳ ಕುರಿತು ಚರ್ಚಿಸಲು ಆಗಮಿಸಿರುವ ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ರಾಧಾ ಮೋಹನ್ ದಾಸ್ ಅಗರವಾಲ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿರುವ ಉಭಯ ಬಣಗಳ ಮುಖಂಡರು ತಮ್ಮ ವಾದ ಮಂಡಿಸಿದ್ದಾರೆ.
ಮಾಜಿ ಶಾಸಕ ಕಟ್ಟಾ ಸುಬ್ರಮಣ್ಯ ನಾಯ್ಡು ನಿವಾಸದಲ್ಲಿ ಯಡಿಯೂರಪ್ಪ ಆಪ್ತರು ಸಭೆ ನಡೆಸಿ, ಯಾವುದೇ ಕಾರಣಕ್ಕೂ ವಿಜಯೇಂದ್ರ ಅವರನ್ನು ಬದಲಾಯಿಸಬಾರದು ಹಾಗೂ ಇವರ ಆಯ್ಕೆಯನ್ನು ಸರ್ವಾನುಮತದ ಆಯ್ಕೆ ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.
ಮಾಜಿ ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಕಟ್ಟಾ ಸುಬ್ರಮಣ್ಯ ನಾಯ್ಡು, ಬಸವರಾಜ್ ದಡೆಸಗೂರು, ಬಸವರಾಜ್ ನಾಯ್ಕ್, ಹರ್ತಾಳ್ ಹಾಲಪ್ಪ, ಜೀವರಾಜ್, ಬಿ.ಸಿ.ಪಾಟೀಲ್, ಅರುಣ್ ಕುಮಾರ್, ರೂಪಾಲಿ ನಾಯಕ್, ಹರ್ಷವರ್ಧನ್, ವೈ.ಸಂಪಂಗಿ ಸೇರಿದಂತೆ ಹಲವರು ರಾಧಾ ಮೋಹನ್ ದಾಸ್ ಅಗರ್ವಾಲ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.
ಪಕ್ಷದ ಸಂಘಟನಾತ್ಮಕ ವಿಷಯಗಳ ಕುರಿತು ಚರ್ಚಿಸಲು ಆಗಮಿಸಿರುವ ರಾಜ್ಯ ಉಸ್ತುವಾರಿ ನಾಯಕರಾದ ರಾಧಾಮೋಹನ್ ದಾಸ್ ಅಗರವಾಲ್, ತಮಿಳುನಾಡಿನ ಪೊನ್ನು ರಾಧಾಕೃಷ್ಣನ್ ಮತ್ತು ಸಹ ಉಸ್ತುವಾರಿ ಸುಧಾಕರ ರೆಡ್ಡಿ ಅವರು ಪಕ್ಷದ ಎಲ್ಲಾ ಚುನಾಯಿತ ಸದಸ್ಯರ ಅಭಿಪ್ರಾಯಗಳನ್ನು ಆಲಿಸಿದರು.
ಈ ವೇಳೆ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ ಬಣದಲ್ಲಿ ಗುರುತಿಸಿಕೊಂಡಿರುವ ಹಲವರು ವಿಜಯೇಂದ್ರ ಬದಲಾವಣೆಗೆ ಆಗ್ರಹಿಸಿ ಮನವಿ ಸಲ್ಲಿಸಿದರು.




