ಶಿವಮೊಗ್ಗ: ಇ-ಶ್ರಮ ಪೋರ್ಟಲ್ ಮೂಲಕ ನೊಂದಣಿಯಾದ ಅಸಂಘಟಿತ ಕಾರ್ಮಿಕ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ(ಪಿಎಂಬಿವೈ) ಅಡಿ ರೂ.2 ಲಕ್ಷಗಳ ಅಪಘಾತ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಮಾ.31 ಅಂತಿಮ ದಿನವಾಗಿದೆ.
- ಚುನಾವಣೆಯಲ್ಲಿ ಸೋಲುವ ಭಯದಿಂದ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅನುಮಾನ: ಆರ್.ಅಶೋಕ
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
ಕೇಂದ್ರ ಸರ್ಕಾರ ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ(ಎನ್ಡಿಲಯುಡಬ್ಲ್ಯು) ಕ್ರೋಢೀಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ ದಿ: 26-08-2021 ರಿಮದ ನೋಂದಾಯಿಸಲಾಗುತ್ತಿದ್ದು ದಿ: 31-03-2022 ರವರೆಗೆ ನೋಂದಣಿಯಾದ ಮತ್ತು ಸದರಿ ದಿನಾಂಕದೊಳಗೆ ಅಪಘಾತಕ್ಕೀಡಾದ ಫಲಾನುಭವಿಗಳಿಗೆ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಮಾ.31 ಅಂತಿಮ ದಿನವಾಗಿರುತ್ತದೆ.
ಫಲಾನುಭವಿ ಆಧಾರ್ ಸಂಖ್ಯೆ, ಯುಎಎನ್ ಕಾರ್ಡ್(ಇ-ಶ್ರಮ್) ಸಂಖ್ಯೆ, ಮರಣ ಪ್ರಮಾಣ ಪತ್ರ, ಮರಣಕ್ಕೆ ಕಾರಣದ ವೈದ್ಯಕೀಯ ಪ್ರಮಾಣ ಪತ್ರ, ಎಫ್ಐ)ಆರ್, ಪಂಚನಾಮ, ಇತರೆ ಸೂಕ್ತ ದಾಖಲಾತಿಗಳನ್ನು ಕಾರ್ಮಿಕ ಅಧಿಕಾರಿಗಳ ಕಚೇರಿ ಶಿವಮೊಗ್ಗ ಉಪ ವಿಭಾಗ, ಶಿವಮೊಗ್ಗ ಇಲ್ಲಿ ನೀಡಿ ಅರ್ಜಿ ಸಲ್ಲಿಸುವ ಮೂಲಕ ಈ ಯೋಜನೆ ಸದುಪಯೋಗ ಪಡೆಯಬೇಕೆಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಹೆಚ್ ಎಸ್ ಸುಮ ತಿಳಿಸಿದ್ದಾರೆ.




