ಕಾರವಾರ: ಯುದ್ಧದಂತಹ ಸಂದರ್ಭಗಳಲ್ಲಿ ಉಂಟಾಗುವ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸುವ ಬಗ್ಗೆ ಸ್ವಯಂ ಸೇವಕರ ಅಗತ್ಯವಿರುವುದರಿಂದ ಸಿವಿಲ್ ಡಿಫೆನ್ಸ್ ಆಕ್ಟ್-1968 ರಂತೆ ಪ್ರತಿ ನೂರು ನಾಗರಿಕರಿಗೆ ಒಬ್ಬರಂತೆ ಪೌರರಕ್ಷಣಾ ಸ್ವಯಂಸೇವಕರನ್ನು ನೋಂದಣಿ ಮಾಡಿಕೊಳ್ಳಲಾಗುತ್ತಿದ್ದು. ಜಿಲ್ಲೆಯ ಆಸಕ್ತ ಅರ್ಹ ಅಭ್ಯರ್ಥಿಗಳು ಮೇ.9 ರಿಂದ ಜೂನ್.9 ರವರೆಗೆ ನಿಗದಿತ ಅರ್ಜಿ ನಮೂನೆ ತುಂಬಿ ನೇಮಕಾತಿಯಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಸಂಜು ಟಿ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಈ ಕುರಿತ ಅರ್ಜಿಯನ್ನು ಗೃಹರಕ್ಷಕದಳ ಜಿಲ್ಲಾ ಸಮಾದೇಷ್ಟರ ಕಚೇರಿ, ದಿವೇಕರ ಕಾಮರ್ಸ್ ಕಾಲೇಜ್ ಎದುರು, ಕೋಡಿಭಾಗ ಕಾರವಾರ ಅಥವಾ hgcd.karnataka.gov.in ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 4ನೇ ತರಗತಿ ಉತ್ತೀರ್ಣರಾಗಿರಬೇಕು. 18 ವರ್ಷ ಮೇಲ್ಪಟ್ಟಿರಬೇಕು. ದೈಹಿಕವಾಗಿ ಸಧೃಡರಾಗಿರಬೇಕು.
ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಪ್ರತಿ ಮತ್ತು ಅಂಕಪಟ್ಟಿ, ಶಾಲಾ ವರ್ಗಾವಣೆ ಪ್ರತಿಯನ್ನು ಲಗತ್ತಿಸಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಗೃಹರಕ್ಷಕದಳ ಕಚೇರಿ ಕಾರವಾರ ದೂರವಾಣಿ ಸಂಖ್ಯೆ:08382-200137 ಅಥವಾ 91110683910 ನ್ನು ಸಂಪರ್ಕಿಸಬಹುದು.




