ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯದ ಬಿ.ಎಡ್ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ
ಚಿತ್ರದುರ್ಗ: 2024-25ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯದ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿ.25 ಕೊನೆಯ ದಿನವಾಗಿದೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಅರ್ಹ ಅಭ್ಯರ್ಥಿಗಳು ನಿವಾಸಿ ದೃಢೀಕರಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ವರ್ಷದ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಶುಲ್ಕ ರಶೀದಿ, ಆಧಾರ್ ಕಾರ್ಡ್, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ವ್ಯಾಸಂಗ ದೃಢೀಕರಣ ಪತ್ರ ಹಾಗೂ ಬ್ಯಾಂಕ್ ಪಾಸ್ಬುಕ್ (ಕಟ್ಟಾಯವಾಗಿ ಆಧಾರ್ ಲಿಂಕ್ ಮಾಡಿಸಿರಬೇಕು) ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಜಾಲತಾಣ https://sevsindhu.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 08194-235134 ಗೆ ಸಂಪರ್ಕಿಸಬಹುದು.



