ದಾವಣಗೆರೆ: ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ 4 ವರ್ಷದ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಮತೀಯ ಅಲ್ಪಸಂಖ್ಯಾತರ ವರ್ಗಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಸಿಖ್, ಆಂಗ್ಲೋಇಂಡಿಯನ್ ಗೆ ಸೇರಿದವರು ಅರ್ಜಿ ಸಲ್ಲಿಸಬಹುದು.
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
- ಕಾಮಗಾರಿ ಬಿಲ್ ಪಾವತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ : ಕೃಷ್ಣ ಬೈರೇಗೌಡ
ಜುಲೈ 20 ಅರ್ಜಿ ಸಲ್ಲಿಸಲು ಕೊನೆಯ ದಿನ. ತರಬೇತಿಯ ಅವಧಿ 4 ವರ್ಷಗಳಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹೆಯಾನ ರೂ.5000 ತರಬೇತಿ ಭತ್ಯೆ ನೀಡಲಾಗುವುದು.
ಜಿಲ್ಲೆಯಿಂದ 05 ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ, ಹೆಚ್ಚಿನ ಮಾಹಿತಿಗೆ ದೂರವಾಣಿ 08192-250022 ಸಂಪರ್ಕಿಸಬಹುದು.




