ಬಳ್ಳಾರಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಸಿ.ಎ., ಬಿ.ಲಿಬ್.ಐ.ಎಸ್ಸಿ., ಬಿ.ಎಸ್.ಡಬ್ಲ್ಯು,. ಎಂ.ಎ., ಎಂ.ಕಾಂ., ಎಂ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲೂ., ಎಂ.ಲಿಬ್.ಐ.ಎಸ್ಸಿ., ಪಿಜಿ ಸರ್ಟಿಫಿಕೇಟ್, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಶಿಕ್ಷಣಕ್ರಮಗಳಿಗೆ ಬಳ್ಳಾರಿಯ ಪ್ರಾದೇಶಿಕ ಕೇಂದ್ರದಲ್ಲಿ ಆನ್‌ಲೈನ್ ಮೂಲಕ ಪ್ರವೇಶಾತಿ ನೀಡಲಾಗುತ್ತಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ವಿಶ್ವವಿದ್ಯಾನಿಲಯದ ಅಂತರ್ಜಾಲ https://www.ksoumysuru.ac.in/ ನಲ್ಲಿ ಲಭ್ಯವಿರುವ ಪ್ರಾಸ್‌ಪೆಕ್ಟಸ್‌ನಲ್ಲಿ ಎಲ್ಲಾ ವಿವರಗಳನ್ನು ನೀಡಿದ್ದು, ವಿದ್ಯಾರ್ಥಿಗಳು ಅದರನ್ವಯ ಅರ್ಹ ಶಿಕ್ಷಣಕ್ರಮಗಳಿಗೆ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಆನ್‌ಲೈನ್ ಅಡ್ಮಿಷನ್ ಪೋರ್ಟಲ್ ಮೂಲಕ ಪ್ರವೇಶಾತಿ ಮಾಡಿಕೊಳ್ಳಬಹುದಾಗಿದೆ.
ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ / ಎಕ್ಸ್ಸರ್ವೀಸ್‌ಮನ್ ವಿದ್ಯಾರ್ಥಿಗಳು, ಆಟೋ/ಕ್ಯಾಬ್ ಡ್ರೈವರ್ಸ್ ಮತ್ತು ಕೆ.ಎಸ್.ಆರ್.ಟಿ.ಸಿ ನೌಕರರಿಗೆ ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ಶೇ.10 ರಷ್ಟು ವಿಶೇಷ ರಿಯಾಯಿತಿ ಇದೆ.
ಕೋವಿಡ್‌ನಿಂದಾಗಿ ಮೃತರಾದ ಪೋಷಕರ ಮಕ್ಕಳಿಗೆ, ದೃಷ್ಠಿಹೀನ ವಿದ್ಯಾರ್ಥಿಗಳಿಗೆ ಹಾಗೂ ತೃತಿಯ ಲಿಂಗಗಳಿಗೆ ಪೂರ್ಣಶುಲ್ಕ ವಿನಾಯಿತಿ ಇದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು. ಅಕ್ಟೋಬರ್ 31ರಂದು ಪ್ರವೇಶಾತಿ ಮಾಡಿಸಲು ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವಾಗ ಯಾವುದೇ ರೀತಿಯ ತೊಂದರೆಯಾದಲ್ಲಿ ಆನ್-ಲೈನ್ ಸಹಾಯವಾಣಿ 8800335638/8690544544 ಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕರಾಮುವಿ ಪ್ರಾದೇಶಿಕ ಕೇಂದ್ರ, ಜಿಲ್ಲಾ ಕ್ರೀಡಾಂಗಣದ ಹತ್ತಿರ, ಪ್ರಾದೇಶಿಕ ವಿಜ್ಞಾನ ಕೇಂದ್ರದ ಹಿಂಭಾಗ, ನಲ್ಲಚೆರವು ಪ್ರದೇಶ, ಬಳ್ಳಾರಿ ಅಥವಾ ಮೊ.7892597159 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಪ್ರಾದೇಶಿಕ ನಿರ್ದೇಶಕ ಡಾ.ಹೆಚ್.ಮಲ್ಲಿಕಾರ್ಜುನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




