ಕೊಪ್ಪಳ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಕ್ಕೆ ಸೇರಿದ ಅಲೆಮಾರಿ ಸಮುದಾಯದವರಿಂದ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯಲ್ಲಿ ಖಾಲಿ ಇರುವ ನಾಮನಿರ್ದೇಶಿತ ಸದಸ್ಯರನ್ನು ಆಯ್ಕೆ ಮಾಡಲು ಆಸಕ್ತ ಪುರುಷ ಹಾಗೂ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ನಾಮನಿರ್ದೇಶಿತ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸುವವರು, ಉಪನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ಜಿಲ್ಲೆ ಈ ಕಾರ್ಯಲಯಕ್ಕೆ ಅರ್ಜಿಗಳನ್ನು ಜನವರಿ 24ರ ಸಂಜೆ 5.30 ಗಂಟೆಯೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



