ಧಾರವಾಡ: 2024-25ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಅಭ್ಯರ್ಥಿಯ ಕುಟುಂಬದ ವಾರ್ಷಿಕ ರೂ. 2.50 ಲಕ್ಷ ಆದಾಯ ಮಿತಿ ಹೊಂದಿರುವ, 40 ವರ್ಷದೊಳಗೆ ಇರುವ ಕಾನೂನು ಪದವಿ ಪಡೆದ 2 ವರ್ಷದೊಳಗಿನ ಅವಧಿಯಲ್ಲಿರುವ ಅರ್ಹ ಮತ್ತು ಆಸಕ್ತಿಯುಳ್ಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾನೂನು ಪದವೀಧರರು www.twd.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಅಪಲೋಡ್ ಮಾಡಿಕೊಂಡು ಜೂನ್ 31, 2024 ರೊಳಗಾಗಿ ಸಲ್ಲಿಸಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 10,000 ರೂ.ಗಳ ಶಿಷ್ಯವೇತನವನ್ನು ಸರಕಾರಿ, ಹಿರಿಯ ವಕೀಲರ ಮಾರ್ಗದರ್ಶನದಂತೆ 2 ವರ್ಷಗಳ ಕಾಲ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0836-2447201 ಗೆ ಸಂಪರ್ಕಿಸಬಹುದು.




