ಹಾಸನ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಕೆಳಕಂಡ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಪದವಿ ಪೂರ್ವ ಕಾಲೇಜು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜು, ಶಾಲೆಗಳಲ್ಲಿ (ಉನ್ನತೀಕರಣಗೊಂಡ), ಮೌಲಾನಾ ಆಜಾದ್ ಮಾದರಿ ಕಾಲೇಜುಗಳಿಗೆ 2025-26ನೇ ಶೈಕ್ಷಣಿಕ ಸಾಲಿಗೆ 11ನೇ ತರಗತಿಗೆ ವಿಜ್ಞಾನ ಮತ್ತು ವಾಣಿಜ್ಯ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಮತ್ತು ಪಾರ್ಸಿ ಸಮುದಾಯಕ್ಕೆ ಶೇ 75 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ (ಓಬಿಸಿ) ಶೇ: 25 ಸ್ಥಾನಗಳು ಮೀಸಲಾತಿ ಇರುತ್ತದೆ. ಉಚಿತ ಪ್ರವೇಶಕ್ಕಾಗಿ “ಸೇವಾ ಸಿಂಧು ಪೋರ್ಟಲ್” ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಅರ್ಜಿ ಸಲ್ಲಿಸಲು ಕೊನೆಯ ಮೇ.17 ಎಲ್ಲಾ ಅರ್ಹ 10ನೇ ತರಗತಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ನಲ್ಲಿ ನೇರವಾಗಿ ಲಿಂಕ್ https://sevasindhuservices.karnataka.gov.in/ ಮೂಲಕ ಸಲ್ಲಿಸಬಹುದು ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ, ಅಥವಾ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಉಚಿತವಾಗಿ ಸಲ್ಲಿಸಬಹುದು.
ವಸತಿ ಕಾಲೇಜುಗಳ ವಿವರ : ಸರ್ಕಾರಿ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಪದವಿ ಪೂರ್ವ ಕಾಲೇಜು, ಗುರುಮಾರನಹಳ್ಳಿ, ಚನ್ನರಾಯಪಟ್ಟಣ ತಾಲ್ಲೂಕು. ಪ್ರವೇಶಾತಿ ತರಗತಿ 11ನೇ ತರಗತಿ ದೂರವಾಣಿ ಸಂಖ್ಯೆ 7353600407, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ರಂಗಾಪುರ ಕಾವಲು, ಅರಸೀಕೆರೆ, ಪ್ರವೇಶಾತಿ ತರಗತಿ 11ನೇ ತರಗತಿ, ದೂರವಾಣಿ ಸಂಖ್ಯೆ 9449412395, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಚಿಟ್ಟನಹಳ್ಳಿ, ಹೊಳೆನರಸೀಪುರ ತಾಲ್ಲೂಕು, ಪ್ರವೇಶಾತಿ ತರಗತಿ 11ನೇ ತರಗತಿ, ದೂರವಾಣಿ ಸಂಖ್ಯೆ 9113200509, ಮೌಲಾನಾ ಆಜಾದ್ ಮಾದರಿ ಶಾಲೆ, ಅರಳೇಪೇಟೆ, ಹಾಸನ, ಪ್ರವೇಶಾತಿ ತರಗತಿ 11ನೇ ತರಗತಿ, ದೂರವಾಣಿ ಸಂಖ್ಯೆ 9035835041.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಆಕಾಶವಾಣಿ ಹಿಂಭಾಗ, ಹಾಸನ. ದೂರವಾಣಿ ಸಂಖ್ಯೆ: 08172-268373/08172-267373 ಗೆ ಸಂಪರ್ಕಿಸಬಹುದಾಗಿದೆ. ಅಥವಾ ಆಯಾ ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು.




