ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

2 years ago

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಾಣ ಮಾಡಿ ಬಯಲು ಶೌಚಮುಕ್ತ ನಗರ ಪ್ರದೇಶವಾಗಿ ಘೋಷಿಲಾಗಿದೆ. ಕೇಂದ್ರ ಸರ್ಕಾರ ಸ್ವಚ್ಛ ಭಾರತ್ ಮಿಷನ್ 2 ರಡಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿದೆ ಎಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.

ಇದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಂತಿಕೆಯಾಗಿ ರೂ. 6,667/- ಗಳ ಸಹಾಯಧನವನ್ನು ನೀಡಲಾಗುವುದು. ಶೌಚಾಲಯ ರಹಿತ ಕುಟುಂಬಗಳು ವೈಯುಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು  www.swachhbharathurban.gov.in/ihhl ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಸಿ, ಅಗತ್ಯ ದಾಖಲೆಗಳನ್ನು ದಾವಣಗೆರೆ ಮಹಾನಗರ ಪಾಲಿಕೆಗೆ ಸಲ್ಲಿಸಬಹುದು.

Leave a Reply