ಶಿವಮೊಗ್ಗ: 2024-25 ನೇ ಸಾಲಿನ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಂಸ್ಥೆ, ಶಿವಮೊಗ್ಗ ಇಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್ಗಳಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
02 ವರ್ಷಗಳ ಐಟಿಐ/ದ್ವಿತೀಯ ಪಿಯುಸಿ(ವಿಜ್ಞಾನ/ದ್ವಿತೀಯ ಪಿಯುಸಿ(ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಸರ್ಕಾರಿ ಪಾಲಿಟೆಕ್ನಿಕ್ಗಳಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಸೀಟುಗಳನ್ನು ಭರ್ತಿ ಮಾಡಲು ಪ್ರಾಂಶುಪಾಲರ ಹಂತದಲ್ಲಿಯೇ ಮೆರಿಟ್ ಆಧಾರಿತವಾಗಿ ಆಫ್ಲೈನ್ ಮೂಲಕ ದಿ: 10-06-2024 ರಿಂದ 25-06-2024 ರವರೆಗೆ ಅರ್ಜಿ ಸ್ವೀಕರಿಸಲಾಗುವುದು. ಹಾಗೂ ದಿ: 27-06-2024 ರಿಂದ 28-06-2024 ರವರೆಗೆ ಸೀಟು ಹಂಚಿಕೆ ಮಾಡಲಾಗುವುದು.
ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟಿಸ್(ಕನ್ನಡ), ಕಮರ್ಷಿಯಲ್ ಪ್ರಾಕ್ಟಿಸ್(ಇಂಗ್ಲೀಷ್), ಆಪರೇಲ್ ಡಿಸೈನ್ & ಫ್ಯಾಬ್ರಿಕೇಷನ್ ಟೆಕ್ನಾಲಜಿ ಕೋರ್ಸುಗಳು ಲಭ್ಯವಿದೆ.
ಆಸಕ್ತ ಅಭ್ಯರ್ಥಿಗಳು ಐಟಿಐ/ಪಿಯುಸಿ ಪರೀಕ್ಷೆಯಲ್ಲಿ ಶೇ.35 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಮೂಲ ವರ್ಗಾವಣೆ ಪ್ರಮಾಣ ಪತ್ರ/ಎನ್ಓಸಿ, 5 ವರ್ಷದ ವ್ಯಾಸಂಗ ಪ್ರಮಾಣ ಪತ್ರ, ಜಾತಿ ಮತ್ತು ಆಧಾರಯ ಪ್ರಮಾಣ ಪತ್ರ, ಆಧಾರ್, 04 ಭಾವಚಿತ್ರಗಳನ್ನು ಸಲ್ಲಿಸಬೇಕು. ಜೂನ್ 25 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದ್ದು ಹೆಚ್ಚಿನ ವಿವರಗಳಿಗೆ ರವಿನಾಯಕ್ ಡಿ, ಪ್ರಾಂಶುಪಾಲರು ಮೊ.ಸಂ: 9886610245 ನ್ನು ಸಂಪರ್ಕಿಸಬಹುದು.




