ಬಳ್ಳಾರಿ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಕೊಳಗಲ್ಲಿನ ಏಕಲವ್ಯ ವಸತಿ ಕಾಲೇಜಿಗೆ ಪ್ರಥಮ ಪಿಯುಸಿ (ವಿಜ್ಞಾನ ಮತ್ತು ವಾಣಿಜ್ಯ ವಿಭಾಗ) ಗೆ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
ಆಸಕ್ತ ವಿದ್ಯಾರ್ಥಿಗಳು ಜಿಲ್ಲೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಯಾವುದೇ ವಸತಿ ಶಾಲೆ, ಕಾಲೇಜುಗಳಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಸಲ್ಲಿಸಬಹುದು. ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಂಬೇಡ್ಕರ್ ಮತ್ತು ಗಾಂಧಿತತ್ವ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕೊಳಗಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಯ ಪ್ರಾಂಶುಪಾಲರ ಕಚೇರಿ ಅಥವಾ ಮೊ.9886297280 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




