ಬಳ್ಳಾರಿ: ಜಿಪಂ ಗ್ರಾಮೀಣ ಕೈಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನ ಆರ್‌ಎಪಿ ಯೋಜನೆಯಡಿ ಗ್ರಾಮೀಣ ಭಾಗದ ಮಹಿಳಾ ಅಭ್ಯರ್ಥಿಗಳಿಂದ ಹೊಲಿಗೆ ತರಬೇತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಪಂ ಗ್ರಾಮೀಣ ಕೈಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
26 ಸಾಮಾನ್ಯ ವರ್ಗದ ಮತ್ತು ವಿಶೇಷ ಘಟಕ ಯೋಜನೆಯಡಿ 04 ಸೇರಿ ಒಟ್ಟು 30 ಮಹಿಳಾ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಂಡ್ ಗ್ರಾಮೀಣ ತರಬೇತಿ ಸಂಸ್ಥೆಯಿಂದ ಒಂದು ತಿಂಗಳ ಉಚಿತ ವಸತಿಯೊಂದಿಗೆ ಶಿಷ್ಯವೇತನ ರಹಿತ ತರಬೇತಿ ನೀಡಲಾಗುವುದು. ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದ ಮಹಿಳಾ ಅಭ್ಯರ್ಥಿಗಳಿಗೆ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಿಸಲಾಗುವುದು.
ಅರ್ಜಿ ಸಲ್ಲಿಸಲು ವೆಬ್‌ಸೈಟ್ ballari.nic.in ವಿಳಾಸಕ್ಕೆ ಭೇಟಿ ನೀಡಬೇಕು. ಅರ್ಜಿ ಸಲ್ಲಿಸಲು ಜ.22 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳ ಬಳ್ಳಾರಿ-ಮೊ.9035547140, ಸಂಡೂರು-ಮೊ.9844200579, ಜಿಪಂ ಗ್ರಾಮೀಣ ಕೈಗಾರಿಕೆ ಇಲಾಖೆಯ ಉಪನಿರ್ದೇಶಕರ ಮೊ.9901313417 ಗೆ ಸಂಪರ್ಕಿಸಬಹುದು.




