ಕೊಪ್ಪಳ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
18 ರಿಂದ 45 ವಯೋಮಾನದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಜನವರಿ 16 ರಿಂದ 10 ದಿನಗಳ ತರಕಾರಿ ಬೆಳೆಗಳ ನರ್ಸರಿ ತರಬೇತಿ ಮತ್ತು ಫೆಬ್ರವರಿ 03 ರಿಂದ 13 ದಿನಗಳ ವಾಣಿಜ್ಯ ತೋಟಗಾರಿಕೆ ಉಚಿತ ತರಬೇತಿಗಳು ಆರಂಭವಾಗಲಿದ್ದು, ತರಬೇತಿ ಅವಧಿಯಲ್ಲಿ ಊಟ ಹಾಗೂ ವಸತಿಯು ಉಚಿತವಾಗಿರುತ್ತದೆ.
ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಜನವರಿ 14 ಕೊನೆಯ ದಿನವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್ ನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು.
ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ, ದೂ.ಸಂ: 9980510717, 9483485489 ಗೆ ಸಂಪರ್ಕಿಸಬಹುದು.



