ದಾವಣಗೆರೆ: ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು, ಮಾವು, ಸಪೋಟ, ಸೀಬೆ, ನೇರಳೆ, ವೀಳ್ಯದೆಲೆ, ಅಂಗಾಂಶ ಬಾಳೆ, ಡ್ರಾಗನ್ ಫೂಟ್, ಮಲ್ಲಿಗೆ, ಗುಲಾಬಿ ಮತ್ತು ಬದುಗಳಲ್ಲಿ ತೆಂಗು ಇತ್ಯಾದಿ ಬೆಳೆಗಳನ್ನು ಬೆಳೆಯಲು ಇಚ್ಚಿಸುವ ಸಣ್ಣ, ಅತೀ ಸಣ್ಣ ರೈತರು ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಆಸಕ್ತ ರೈತರು ಪಹಣಿ, ಆಧಾರ್, ಉದ್ಯೋಗ ಚೀಟಿ, ಸಣ್ಣ ಮತ್ತು ಅತೀ ಸಣ್ಣ ರೈತರ ಪ್ರಮಾಣ ಪತ್ರ, ಪರಿಶಿಷ್ಟ ಜಾತಿ, ಪಂಗಡದವರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರದೊಂದಿಗೆ ಸಂಬಂಧಪಟ್ಟ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ ಹೊನ್ನಾಳಿ ಅಥವಾ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು.




