ಶಿವಮೊಗ್ಗ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ್ ಇಲಾಖೆ ರಾಜ್ಯದಲ್ಲಿ ನಡೆಸಲಾಗುತ್ತಿರುವ ಮುಸ್ಲಿಂ ಸಮುದಾಯದ ನೋಂದಾಯಿತ ಮದರಸಾಗಳ ಆಧುನೀಕರಣ, ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡಲು ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 2 ಮದರಸಾಸಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಸ್ವಂತ ಕಟ್ಟಡವನ್ನು ಹೊಂದಿರುವ ಮದರಸಗಳಿಂದ ಅರ್ಜಿ ಆಹ್ವಾನಿಸಿದೆ.
ಮದರಸಗಳಲ್ಲಿ ಕನಿಷ್ಠ 10 ಮಕ್ಕಳ ದಾಖಲಾತಿ ಸಂಖ್ಯೆ ಹೊಂದಿದ್ದು, ಅತಿ ಹೆಚ್ಚು ವಿದ್ಯಾರ್ಥಿಗಳಿರುವ ಹಾಗೂ ಮೂಲಭೂತ ಸೌಕರ್ಯಗಳ ಅತಿ ಅಗತ್ಯವಿರುವ ಮದರಸಾಗಳನ್ನು ಆಯ್ಕೆ ಮಾಡಲಾಗುವುದು. ಈಗಾಗಲೇ ಇದೇ ಉದ್ದೇಶಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಥವಾ ವಕ್ಫ್ ಮಂಡಳಿಯಿಂದ ಅನುದಾನ ಪಡೆದಿದ್ದಲ್ಲಿ ಅಂತಹ ಮದರಸಾಗಳನ್ನು ಪರಿಗಣಿಸುವುದಿಲ್ಲ. ಅರ್ಹ ಮದರಸಾಗಳಿಗೆ ಒಂದು ಬಾರಿಗೆ ಗರಿಷ್ಠ 5.00 ಲಕ್ಷ ರೂ.ಗಳ ಅನುದಾನವನ್ನು ಮಂಜೂರು ಮಾಡಲಾಗುವುದು.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಇಲಾಖೆ ಕಚೇರಿಯಿಂದ ಪಡೆದು, ಅಗತ್ಯ ದಾಖಲೆಗಳೊಂದಿಗೆ ಡಿ. 15 ರೊಳಗಾಗಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಶಿವಮೊಗ್ಗ ದೂ.ಸಂ.: 08182-220206 ನ್ನು ಸಂಪರ್ಕಿಸಬಹುದು.




