ಸಂಘ, ಬೀದಿಬದಿ ವ್ಯಾಪಾರಸ್ಥರಿಂದ ಗುರುತಿನ ಚೀಟಿಗಾಗಿ ಅರ್ಜಿ ಆಹ್ವಾನ

2 years ago

#Application #invitation identitycard #association #streetvendors

ಬಳ್ಳಾರಿ: ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ದೀನ್ ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ 2023-24ನೇ ಸಾಲಿನ ಸ್ವಯಂ ಉದ್ಯೋಗ ಕಾರ್ಯಕ್ರಮದ ಉಪ ಘಟಕದ ವ್ಯಕ್ತಿಗತ ಉದ್ದಿಮೆಶೀಲತೆ (ಸಾಲ ಮತ್ತು ಸಹಾಯಧನ) ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳುವ ಸಂಘ ಹಾಗೂ ಬೀದಿಬದಿ ವ್ಯಾಪರಸ್ಥರ ಗುರುತಿನ ಚೀಟಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ಕೈಗೊಳ್ಳುವ ಆಸಕ್ತಿ ಇರುವ ಸ್ವ-ಸಹಾಯ ಗುಂಪಿನಲ್ಲಿ ಸದಸ್ಯರಿರುವ ಕುಟುಂಬದ ಅರ್ಹ ಫಲಾನುಭವಿಗಳಿಂದ ಗುಂಪು ಉದ್ದಿಮೆಶೀಲತೆ (ಸಾಲ ಮತ್ತು ಸಹಾಯಧನ) ಚಟುವಟಿಕೆಗಳ ಅಡಿ ಸ್ವಯಂ ಉದ್ಯೋಗ ಕೈಗೊಳ್ಳುವ ಮಹಿಳಾ ಸ್ವ-ಸಹಾಯ ಗುಂಪು ಹಾಗೂ ಪ್ರದೇಶ ಮಟ್ಟದ ಒಕ್ಕೂಟವನ್ನು ರಚಿಸಲು ಆಸಕ್ತಿ ಹೊಂದಿದ ಅರ್ಹ ಫಲಾನುಭವಿಗಳು ಅಥವಾ ಗುಂಪುಗಳು ಮತ್ತು ಬೀದಿಬದಿ ವ್ಯಾಪಾರಿಗಳು ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಫಲಾನುಭವಿಗಳು ಪುರಸಭೆ ಕುರುಗೋಡು ವ್ಯಾಪ್ತಿಯ ನಿವಾಸಿಯಾಗಿದ್ದು, ಬಡತನರೇಖೆ ಕೆಳಗಿನ ಕುಟುಂಬದವರಾಗಿರಬೇಕು. ಅರ್ಜಿ ಸಲ್ಲಿಸಲು ಡಿ.18 ಕೊನೆಯ ದಿನ.

ಬೇಕಾದ ದಾಖಲೆಗಳು: ರೇಷನ್ ಕಾರ್ಡ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ಎರಡು ಭಾವಚಿತ್ರಗಳು, ಸ್ವಯಂ ಉದ್ಯೋಗದ ಬಗ್ಗೆ ಭಾವಚಿತ್ರ, ಗುಂಪಿಗೆ ಸಂಬಂಧಿಸಿದ ದಾಖಲೆಗಳು, ಬ್ಯಾಂಕ್ ಪಾಸ್ಬುಕ್ ಜೆರಾಕ್ಸ್, ಅಂಗವಿಕಲರಿದ್ದಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕುರುಗೋಡು ಪುರಸಭೆ ಕಚೇರಿಗೆ ಸಂಪರ್ಕಿಸಬಹುದು.

Leave a Reply