ಬಳ್ಳಾರಿ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಜಿಲ್ಲೆಯ ವಲಸೆ ಕುರಿಗಾರರಿಗೆ ಗುರುತಿನ ಚೀಟಿ ವಿತರಿಸುವ ಯೋಜನೆಯಡಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಅರ್ಜಿದಾರರು ಕನಿಷ್ಠ 20 ಕುರಿಗಳನ್ನು ಹೊಂದಿರಬೇಕು. ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ತಮ್ಮ ತಾಲ್ಲೂಕು ವ್ಯಾಪ್ತಿಯ ಪಶು ಆಸ್ಪತ್ರೆ ಅಥವಾ ಹೊಸಪೇಟೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ನಿಗದಿತ ದಾಖಲೆಗಳೊಂದಿಗೆ ತಮ್ಮ ತಾಲ್ಲೂಕು ವ್ಯಾಪ್ತಿಯ ಪಶು ಆಸ್ಪತ್ರೆ ಅಥವಾ ಹೊಸಪೇಟೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆಯ ಪಶು ಆಸ್ಪತ್ರೆ ಆವರಣದ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂ.08394-225129 ಗೆ ಸಂಪರ್ಕಿಸಬಹುದು ಎಂದು ಹೊಸಪೇಟೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




