ಬೆಂಗಳೂರು: ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ 2024-25ನೇ ಸಾಲಿಗೆ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿಗಳಿಂದ ಅಥವಾ ಸಂಸ್ಥೆಗಳಿಂದ “ರಾಷ್ಟ್ರ ಪ್ರಶಸ್ತಿಗಾಗಿ” ಆನ್ ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಆಸಕ್ತರು ವೆಬ್ ಸೈಟ್ www.awards.gov.in ನಲ್ಲಿ ಜುಲೈ 31ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ ಹೊಸೂರು ರಸ್ತೆ, ಬೆಂಗಳೂರು ನಗರ ಜಿಲ್ಲೆ -560029 ಅಥವಾ ದೂರವಾಣಿ ಸಂಖ್ಯೆ: 080-29752324 ಗೆ ಸಂಪರ್ಕಿಸಬಹದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.




