ಶಿವಮೊಗ್ಗ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಬೌದ್ಧ ಮತ್ತು ಸಿಖ್ ಸಮುದಾಯದ 35 ವರ್ಷ ವಯೋಮಿತಿಯುಳ್ಳ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯಗಳಲ್ಲಿ ಪಿಹೆಚ್ಡಿದ ಫೆಲೋಶಿಪ್ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಆಸಕ್ತ ವಿದ್ಯಾರ್ಥಿಗಳು ಸೇವಾ ಸಿಂದು sevasindhu.karnataka.gov.in ಪೋರ್ಟಲ್ನಳಲ್ಲಿ ಆಗಸ್ಟ್ 31ರೊಳಗಾಗಿ ಸಲ್ಲಿಸಿ, ಅರ್ಜಿಯ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೇಡ್, 5ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಗಳಾಗಿದ್ದು, ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. ಪೂರ್ಣಕಾಲಿಕ ಕೋರ್ಸ್ನ್ ವಿದ್ಯಾರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ. ವಾರ್ಷಿಕ ಆದಾಯ ಮಿತಿ ರೂ. 8.00 ಲಕ್ಷಗಳನ್ನು ಮೀರಿರಬಾರದು. ಸರ್ಕಾರದ ಶಾಸನಬದ್ಧ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-220206 ನ್ನು ಸಂಪರ್ಕಿಸಬಹುದು.




