ಶಿವಮೊಗ್ಗ: ಶಿವಮೊಗ್ಗ ತಾಲೂಕು ಸಮಾಜ ಕಲ್ಯಾಣ ಇಲಾಖೆಯು 2024-25 ಸಾಲಿನಲ್ಲಿ ಮೆಟ್ರಿಕ್ ಪೂರ್ವ/ ನಂತರದ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಪ್ರವೇಶ ಬಯಸುವ ವಿದ್ಯಾರ್ಥಿಗಳು ಕಳೆದ ಸಾಲಿನ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, SATS ID/ SSP ID/ ಯುನಿರ್ವಸಿಟಿ ಐಡಿ ನಂಬರ್ ಈ ಎಲ್ಲಾ ದಾಖಲೆಗಳೊಂದಿಗೆ ತಾಲೂಕಿನ ಆಯಾ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಕಚೇರಿಯನ್ನು ಖುದ್ದಾಗಿ ಅಥವಾ WWW.SWD.KAR.NIC.IN ಅಥವಾ ಮೊ.ಸಂ.: 9480843192 ನ್ನು ಸಂಪರ್ಕಿಸುವುದು.




