ಶಿವಮೊಗ್ಗ: ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು 2023-24ನೇ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ಪದವಿ/ಡಿಪ್ಲೊಮಾ ಮತ್ತು ವೃತ್ತಿಪರ ಪದವಿಯವರೆಗೆ ಕರ್ನಾಟಕದಲ್ಲಿರುವ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಒಂದನೇ ತರಗತಿಯಿಂದ ಅಂತಿಮ ಪದವಿ/ಡಿಪ್ಲೊಮಾ, ವೃತ್ತಿಪರ ಪದವಿವರೆಗಿನ ವಿದ್ಯಾರ್ಥಿಗಳು ದಿ. 30/09/2024 ರೊಳಗಾಗಿ ಹಾಗೂ ವೃತ್ತಿಪರ ಪದವಿ ವಿದ್ಯಾರ್ಥಿಗಳು ದಿ. 31/10/2024ರೊಳಗಾಗಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಇಲಾಖಾ ಕಚೇರಿ ದೂ.ಸಂ.: 08182-220925ನ್ನು ಸಂಪರ್ಕಿಸಬಹುದು.




