ಶಿವಮೊಗ್ಗ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪ್ರಧಾನಮಂತ್ರಿಗಳ ಹೊಸ 15 ಅಂಶ ಕಾರ್ಯಕ್ರಮಗಳ ಅನುಷ್ಠಾನದ ಜಿಲ್ಲಾ ಮಟ್ಟದ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರುಗಳನ್ನು ಆಯ್ಕೆ ಮಾಡಲು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಸಮುದಾಯಕ್ಕೆ ಸೇರಿರುವ ಪಂಚಾಯತ್ ರಾಜ್/ ಪುರಸಭೆಯಿಂದ ಚುನಾಯಿತರಾದ ಪ್ರತಿನಿಧಿಗಳನ್ನು ಹಾಗೂ ಅಲ್ಪಸಂಖ್ಯಾತರ ಸಂಸ್ಥೆಗಳ 3 ಜನಪ್ರತಿನಿಧಿಗಳನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಅಧಿಕಾರಿಗಳು, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜುಲೈ 05 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,1ನೇ ಮಹಡಿ, ಸತ್ಯಶ್ರೀ ಆರ್ಕೆಡ್, 5ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ, ದೂ.ಸಂ.: 08182-220206 ನ್ನು ಸಂಪರ್ಕಿಸಬಹುದು.



