ಬಳ್ಳಾರಿ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು 2023-24ನೇ ಸಾಲಿನಲ್ಲಿ ಮಹಿಳಾ ತರಬೇತಿ ಯೋಜನೆಯಡಿ ನಿರುದ್ಯೋಗಿ ಮಹಿಳೆಯರಿಗೆ ವಿವಿಧ ರೀತಿಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನು ನೀಡಲು ಮಾನ್ಯತೆ ಪಡೆದ ಅರ್ಹ ಸ್ವಯಂ ಸೇವಾ ತರಬೇತಿ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ.
ನಿಯಮಗಳು:
- ತರಬೇತಿ ನೀಡುವ ಸಂಸ್ಥೆಯು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಲ್ಲಿ kaushalkar.com ವೆಬ್ಸೈಟ್ನಲ್ಲಿ ನೋಂದಣಿಯಾಗಿರಬೇಕು
- ಕೇಂದ್ರ ಸರ್ಕಾರದ ಅಧೀನದಲ್ಲಿ ಅಕ್ರಿಡಿಟೇಶನ್ ಜಾಬ್ ರೋಲ್ಗಳಿಗೆ ಮಾನ್ಯತೆ ಪಡೆದಿರುವ ಸಂಸ್ಥೆಯಾಗಿರಬೇಕು.
- ತರಬೇತಿ ಸಂಸ್ಥೆಯು ತರಬೇತಿ ನೀಡಲು ಮೂಲಭೂತ ಸೌಕರ್ಯಗಳನ್ನು ಹೊಂದಿರಬೇಕು.
- ತರಬೇತಿ ನೀಡುವ ಚಟುವಟಿಕೆಗೆ ಸಂಬಂಧಿಸಿದಂತೆ ಸಂಸ್ಥೆಯವರು ಹೊಂದಿರುವ ಸ್ಥಳಾವಕಾಶದ ಮಾಹಿತಿ, ಯಂತ್ರೋಪಕರಣಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳ ಮಾಹಿತಿಯನ್ನು ಸಲ್ಲಿಸಬೇಕು.
- ತರಬೇತಿ ಸಂಸ್ಥೆಯು ಹೊಂದಿರುವ ಸ್ಥಳಾವಕಾಶ ಯಂತ್ರೋಪಕರಣಗಳ ಹಾಗೂ ಈ ಹಿಂದೆ ತರಬೇತಿ ನೀಡಿದ ಛಾಯಚಿತ್ರಗಳನ್ನು ಸಲ್ಲಿಸಬೇಕು.
ನೋಂದಣಿಯಾಗಿ ಅಕ್ರಿಡಿಟೇಶನ್ ಹೊಂದಿರುವ ತರಬೇತಿ ಸಂಸ್ಥೆಗಳು ಅಗತ್ಯ ದಾಖಲಾತಿಗಳೊಂದಿಗೆ ಪ್ರಸ್ತಾವನೆಯನ್ನು ದ್ವಿಪ್ರತಿಯಲ್ಲಿ ನವೆಂಬರ್ 27 ಸಂಜೆ 5 ರೊಳಗಾಗಿ ಎಸ್.ಪಿ.ಸರ್ಕಲ್ ಹತ್ತಿರದ ಮಹಿಳಾ ಪೊಲೀಸ್ ಠಾಣೆ ಪಕ್ಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.




