ಬಳ್ಳಾರಿ: ಜಿಲ್ಲೆಯ ನಗರ, ಪ್ರತಿ ತಾಲ್ಲೂಕು ಮತ್ತು ಹೋಬಳಿ ಕೇಂದ್ರಗಳಲ್ಲಿ ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರವನ್ನು (ಅಧ್ಯಯನ ಕೇಂದ್ರಗಳನ್ನು) ಪ್ರಥಮ ದರ್ಜೆ ಕಾಲೇಜುಗಳಲ್ಲಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಾದೇಶಿಕ ನಿರ್ದೇಶಕ ಡಾ.ಹೆಚ್.ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು “ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ ” ಎಂಬ ಧ್ಯೇಯ ವಾಕ್ಯದೊಂದಿಗೆ ಉನ್ನತ ಶಿಕ್ಷಣವನ್ನು ಎಲ್ಲರ ಮನೆ ಬಾಗಿಲಿಗೆ ತಲುಪಿಸುತ್ತಾ, ಶಿಕ್ಷಣ ವಂಚಿತರಿಗೆ ಶಿಕ್ಷಣ ಪಡೆಯುವ ಸೌಲಭ್ಯವನ್ನು ನೀಡುವುದು ವಿಶ್ವವಿದ್ಯಾನಿಲಯದ ಮುಖ್ಯ ಧ್ಯೇಯೋದ್ದೇಶವಾಗಿದೆ.
ಆಸಕ್ತ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿಯ ಅಧಿಕೃತ ಆನ್‌ಲೈನ್ ವೆಬ್‌ಸೈಟ್ www.ksoumysuru.ac.in ನಲ್ಲಿ ಅರ್ಜಿ ಭರ್ತಿ ಮಾಡಿ, ನಂತರ ಭರ್ತಿ ಮಾಡಿದ ಅರ್ಜಿಯನ್ನು ಡೀನ್ (ಅಧ್ಯಯನ ಕೇಂದ್ರ) ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತ ಗಂಗೋತ್ರಿ, ಮೈಸೂರು-06 ಇಲ್ಲಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜ.18 ಕೊನೆಯ ದಿನವಾಗಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಯಾವುದೇ ಶುಲ್ಕ ಪಾವತಿ ಮಾಡುವಂತಿಲ್ಲ. ಮುಕ್ತ ವಿವಿಗೆ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳು ಪ್ರವೇಶಾತಿಯನ್ನು ಕಲಿಕಾರ್ಥಿ ಸಹಾಯ ಕೇಂದ್ರಗಳಲ್ಲೂ ಆನ್‌ಲೈನ್ ಮುಖಾಂತರ ಪ್ರವೇಶಾತಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೇರವು ಪ್ರದೇಶದ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಸಿಟಿ ಕಾಲೇಜ್ ಹಿಂಭಾಗದ ಜಿಲ್ಲಾ ಕ್ರೀಡಾಂಗಣದ ಹತ್ತಿರದ ಕರಾಮುವಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರ ಕಚೇರಿ ಅಥವಾ ಮೊ.7892597159 ಗೆ ಸಂಪರ್ಕಿಸಬಹುದು.




