ಧಾರವಾಡ: ರಂಗಾಯಣದಿಂದ ಡಿಸೆಂಬರ್ ಮಾಹೆಯಲ್ಲಿ ರಂಗಭೂಮಿ ಅನುಭವವಿರುವ ನುರಿತ ಕಲಾವಿದರಿಂದ ಹೊಸ ನಾಟಕವನ್ನು ಸಿದ್ಧಪಡಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸಿದ್ಧಪಡಿಸುವ ಹೊಸ ನಾಟಕಕ್ಕೆ 15 ಜನ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಅರ್ಹತೆಯುಳ್ಳ 22 ರಿಂದ 35 ವರ್ಷದೊಳಗಿನ ವಯೋಮಿತಿಯುಳ್ಳ ಆಸಕ್ತ ಕಲಾವಿದರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗುವುದು.
ಆಸಕ್ತ ಕಲಾವಿದರು ಸ್ವ-ವಿವರದೊಂದಿಗೆ ನವೆಂಬರ 28, 2024 ಸಂಜೆ 5 ಗಂಟೆಯ ಒಳಗಾಗಿ ಆಡಳಿತಾಧಿಕಾರಿಗಳು, ರಂಗಾಯಣ ಪಂ. ಬಸವರಾಜ ಬಯಲು ರಂಗಮಂದಿರ, ಕಾಲೇಜು ರಸ್ತೆ, ಧಾರವಾಡ-580001 ವಿಳಾಸಕ್ಕೆ ಅಂಚೆ ಮೂಲಕ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ, 0836-2441706ಗೆ ಸಂಪರ್ಕಿಸಬಹುದು.




