ಧಾರವಾಡ: ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿಯು ಕಳೆದ 15 ವರ್ಷಗಳ ಹಿಂದೆ ಸ್ಥಾಪಿಸಿದ ಭಾರತೀಯ ರಂಗಶಿಕ್ಷಣ ಕೇಂದ್ರ ಪೂರ್ಣ ಪ್ರಮಾಣದ ರಂಗಶಿಕ್ಷಣವನ್ನು ನೀಡುವ ಸಂಸ್ಥೆಯಾಗಿದೆ. ಪ್ರತಿ ವರ್ಷದಂತೆ 2024-25ನೇ ಪ್ರಸಕ್ತ ಸಾಲಿಗೆ ರಂಗಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮಾ ಕೋರ್ಸ್ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ರಂಗತರಬೇತಿ ಪಡೆಯುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಅರ್ಜಿ ಸಲ್ಲಿಸಲು 18 ರಿಂದ 28 ವರ್ಷಗಳು ತುಂಬಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಮತ್ತು ವಿದ್ಯಾರ್ಥಿ ವೇತನ ನೀಡಲಾಗುವುದು.
ಆಸಕ್ತಿವುಳ್ಳ ವಿದ್ಯಾರ್ಥಿಗಳು ವೆಬ್ಸೈಟ್ http://rangayanamysore.karnataka.gov.in ನಲ್ಲಿ ಅರ್ಜಿಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಜೂನ್ 20, 2024 ಸಂಜೆ 5.30 ರೊಳಗೆ ಅಂಚೆಯ ಮೂಲಕ ಅಥವಾ ಉಪನಿರ್ದೇಶಕರ ಕಚೇರಿ ರಂಗಾಯಣ ಮೈಸೂರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0821-2512639, 9148827720 ಗೆ ಅಥವಾ ವೆಬ್ಸೈಟ್ http://rangayanamysore.karnataka.gov.in ಸಂಪರ್ಕಿಸಬಹುದು ಎಂದು ಧಾರವಾಡ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



