ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಹಾವೇರಿ ಜಿಲ್ಲೆಯ ಗೋಟಗೋಡಿಯಲ್ಲಿನ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ಅಕ್ಟೋಬರ್ ಕೊನೆಯ ವಾರದಲ್ಲಿ 3 ದಿನಗಳ ಕಮ್ಮಟ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
- ಕಾಮಗಾರಿ ಬಿಲ್ ಪಾವತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ : ಕೃಷ್ಣ ಬೈರೇಗೌಡ
‘ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು’ ಎಂಬ ಹೆಸರಿನಡಿ ಹಾವೇರಿ ಜಿಲ್ಲೆಯ ಗೋಟಗೋಡಿಯಲ್ಲಿನ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.
ಅರ್ಜಿದಾರರು 20 ರಿಂದ 45 ವಯೋಮಿತಿ ಹೊಂದಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅ.08 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿ ವೆಬ್‌ಸೈಟ್ http://karnatakasahithyaacademy.org ಲಿಂಕ್ ಗೆ ಭೇಟಿ ನೀಡಿ ಅರ್ಜಿ ನಮೂನೆ ಮತ್ತು ಹೆಚ್ಚಿನ ವಿವರ ಪಡೆದುಕೊಳ್ಳಬಹುದು.




