ಶಿವಮೊಗ್ಗ: ಜಿಲ್ಲಾ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳ ವತಿಯಿಂದ 2024-25 ನೇ ಸಾಲಿನಲ್ಲಿ ನೇರಸಾಲ ಯೋಜನೆ, ಉದ್ಯಮ ಶೀಲತಾಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಆಸಕ್ತ ಫಲಾಪೇಕ್ಷಿಗಳು ಶಿವಮೊಗ್ಗ-1, ಗ್ರಾಮ-1, ಕರ್ನಾಟಕ-1, ಸೇವಾ ಸಿಂಧು ಪೋರ್ಟಲ್‌ನಲ್ಲಿ ಅಗತ್ಯ ದಾಖಲೆಗಳೊಂದಿಗೆ ವೆಬ್‌ಸೈಟ್ https://sevasindhu.karnataka.gov.in ರ ಮೂಲಕ ಅಕ್ಟೋಬರ್ 10 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-224349 ನ್ನು ಸಂಪರ್ಕಿಸಬಹುದು.




