ಶಿವಮೊಗ್ಗ: ಶಿಕಾರಿಪುರ ತೋಟಗಾರಿಕೆ ಇಲಾಖಾ ವತಿಯಿಂದ 2024-25ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ (ಅಂಗಾಂಶ ಬಾಳೆ, ಹೈಬ್ರಿಡ್ ತರಕಾರಿ, ಕಾಳುಮೆಣಸು, ಬಿಡಿಹೂ, ಸುಗಂಧರಾಜ ಮತ್ತು ಗುಲಾಬಿ), ಮಾವು ಪುನಶ್ಚೇತನ, ಕೃಷಿ ಹೊಂಡ, ತರಕಾರಿ ಬೆಳೆಗೆ ಪ್ಲಾಸ್ಟಿಕ್ ಹೊದಿಗೆ ಮತ್ತು ಪ್ಯಾಕ್ ಹೌಸ್ ಘಟಕಗಳಡಿ ಸಹಾಯಧನ ನೀಡುತ್ತಿದ್ದು, ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
ಆಸಕ್ತ ರೈತರು ನಿಗಧಿತ ನಮೂನೆ ಅರ್ಜಿಯನ್ನು ಶಿಕಾರಿಪುರ ತಾಲೂಕು ತೋಟಗಾರಿಕೆ ಇಲಾಖೆಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜುಲೈ 15 ರೊಳಗಾಗಿ ಸಲ್ಲಿಸು
ವಂತೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಶಿಕಾರಿಪುರ ತಾಲೂಕು ತೋಟಗಾರಿಕೆ ಕಚೇರಿಯನ್ನು ಸಂಪರ್ಕಿಸಬಹುದು.




