ದಾವಣಗೆರೆ: ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿರುವ ಶಿಥಿಲವಾಗಿರುವ ಮನೆಗಳು ಹಾಗೂ ಖಾಲಿ ನಿವೇಶನ ಹೊಂದಿರುವವರು ಅರ್ಜಿ ಸಲ್ಲಿಸಬಹುದು.
ವಾಜಪೇಯಿ ವಸತಿ ಯೋಜನೆಯಡಿ ಸಾಮಾನ್ಯದಡಿ 177 ಮನೆಗಳು ಲಭ್ಯವಿದ್ದು ಸಹಾಯಧನವಾಗಿ ರೂ.2.70 ಲಕ್ಷ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಪರಿಶಿಷ್ಟ ಪಂಗಡದ 18 ಮನೆಗಳು ಲಭ್ಯವಿದ್ದು ರೂ.3.50 ಲಕ್ಷ ಸಹಾಯಧನ ನೀಡಲಾಗುತ್ತದೆ.
ಆಸಕ್ತರು ಗಂಡ, ಹೆಂಡತಿ ಇಬ್ಬರ ಆಧಾರ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪತ್ರ, ಬ್ಯಾಂಕ್ ಪಾಸ್ ಬುಕ್, ಚಾಲ್ತಿ ಇ-ಸ್ವತ್ತು, ಇಸಿ ನಕಲು, 2 ಭಾವಚಿತ್ರ ಪ್ರತಿಯೊಂದಿಗೆ ಪಾಲಿಕೆಯಲ್ಲಿ ಅರ್ಜಿ ಸಲ್ಲಿಸಬಹುದು.




