ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ಫಾಸ್ಟ್ ಫುಡ್ ತಯಾರಿಕೆ ಕುರಿತು 12 ದಿನಗಳ ಉಚಿತ ತರಬೇತಿಯನ್ನು ಫೆಬ್ರವರಿ 16, 2026 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ನಿರುದ್ಯೋಗಿ ಯುವಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
- ಸಂಗೀತ ಬಾರ್ & ರೆಸ್ಟೋರೆಂಟ್ ಚಿತ್ರದ ಟೀಸರ್ ಬಿಡುಗಡೆಗೆ ಮುಹೂರ್ತ ನಿಗದಿ
- ಅನರ್ಹ ಕಂಪನಿಗೆ ಕಸದ ಟೆಂಡರ್: ಆರ್.ಅಶೋಕ
- ಮಾಂಜಾ ದಾರ ಮಾರಾಟ, ಬಳಕೆ ನಿಷೇಧಕ್ಕೆ ಕಠಿಣ ಕ್ರಮ: ಡಾ.ಜಿ.ಪರಮೇಶ್ವರ್
ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ , ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ : 9481506564, 9740982585, 9380162042, 9241482541, 9113880324 ಗೆ ಸಂಪರ್ಕಿಸಬಹುದು.




