ಬಳ್ಳಾರಿ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ಪ್ರದೇಶದ 20 ರಿಂದ 45 ವಯೋಮಿತಿಯೊಳಗಿನ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಉಚಿತ ಫಾಸ್ಟ್ ಫುಡ್ ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಜುಲೈ 21 ರಿಂದ 12 ದಿನಗಳ ಕಾಲ ವಸತಿ ಸಹಿತವಾಗಿ ಉಚಿತ ತರಬೇತಿ ಮತ್ತು ಕೌಶಲ್ಯದ ಜೊತೆಗೆ ಉದ್ಯಮಶೀಲತೆ, ವ್ಯಕ್ತಿತ್ವ ವಿಕಾಸನಕ್ಕೆ ಸಂಬಂಧಿಸಿದ ಮಾಹಿತಿ ನೀಡಲಾಗುತ್ತದೆ.
ಅರ್ಹತೆಗಳು:
1. ಬಿ.ಪಿ.ಎಲ್. ಕಾರ್ಡ್ ಹೊಂದಿರಬೇಕು.
2.ಕನ್ನಡ ಭಾಷೆ ಓದಲು ಹಾಗೂ ಬರೆಯಲು ಬರುವಂತಹ ನಿರುದ್ಯೋಗಿ ಸ್ವ-ಉದ್ಯೋಗ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.
3. ವಿದ್ಯಾರ್ಹತೆ ಕನಿಷ್ಠ 10ನೇ ತರಗತಿ ಪಾಸಾಗಿರಬೇಕು.
4. ತರಬೇತಿಯ ಬಗ್ಗೆ ಪ್ರಾಥಮಿಕ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
5. 35 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. ಈ ಮೊದಲು ತರಬೇತಿ ಪಡೆದವರು ಪುನಃ ತರಬೇತಿ ಪಡೆಯಲು ಅರ್ಹರಿರುವುದಿಲ್ಲ.
ಆಸಕ್ತ ಅರ್ಹ ಅಭ್ಯರ್ಥಿಗಳು ತ್ವರಿತವಾಗಿ ತಮ್ಮ ಹೆಸರು, ವಿಳಾಸ, ಸಂಪರ್ಕಕ್ಕೆ ಲಭ್ಯವಿರುವ ದೂರವಾಣಿ ಸಂಖ್ಯೆ, ವಯಸ್ಸು, ವಿದ್ಯಾರ್ಹತೆ, ಪಡೆಯಲಿಚ್ಚಿಸಿರುವ ತರಬೇತಿ, ಸಂಬಂಧಿತ ವಿಷಯದಲ್ಲಿ ಇರುವ ಪ್ರಾಥಮಿಕ ಜ್ಞಾನ, ಅನುಭವ ಮುಂತಾದ ಮಾಹಿತಿಯೊಂದಿಗೆ ಬಿಳಿ ಹಾಳೆಯ ಮೇಲೆ ಅರ್ಜಿಯನ್ನು ಬರೆದು ಪಾಸ್ ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರದೊಂದಿಗೆ ರೇಷನ್ ಕಾರ್ಡ್ ಒಂದು ಝೆರಾಕ್ಸ್ ಪ್ರತಿ ಲಗತ್ತಿಸಿ ಅರ್ಜಿಯನ್ನು ಜು.18 ರೊಳಗಾಗಿ ಸಲ್ಲಿಸಬೇಕು.
ಅರ್ಜಿಗಳು ನಮಗೆ ತಲುಪಿದ ನಂತರ ತರಬೇತಿಯಲ್ಲಿ ಭಾಗವಹಿಸುವ ಬಗೆಗೆ ಅರ್ಜಿಯಲ್ಲಿ ನಮೂದಿಸಿದ ಫೋನ್ ನಂಬರ್‌ಗೆ ಫೋನ್ ಮಾಡಿ ತಿಳಿಸಲಾಗುವುದು. ತರಬೇತಿಯಲ್ಲಿ ಪಾಲ್ಗೊಳ್ಳಲು ತಗುಲುವ ಪ್ರಯಾಣ ಭತ್ಯೆಯನ್ನು ತಾವೇ ಭರಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹತ್ತಿರದ ಡಿಐಸಿ ಕಾಂಪೌಂಡ್‌ನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರ ಕಚೇರಿ ಅಥವಾ ಮೊ.9008464120, 9980123603 ಗೆ ಸಂಪರ್ಕಿಸಬಹುದು.




